ಚಿತ್ರದುರ್ಗ: ಇನ್ನೋವಾ ಕಾರಿನ (Car) ಟೈರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿಯಾಗಿ (Accident) ಮೂವರು ಸಾವಿಗೀಡಾದ ಘಟನೆ ಚಿತ್ರದುರ್ಗ (Chitradurga)ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28), ಶರವಣ (31), ಸೇಂದಿಲ್ (29) ಎಂದು ಗುರುತಿಸಲಾಗಿದೆ. ಮೃತ ಅರ್ಜುನ್ ಚನ್ನೈನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಿದ್ದರು. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಇನ್‌ಸ್ಟಾ ಫಾಲೋವರ್ಸ್ ಕುಸಿತ – ಮನನೊಂದು ಕಂಟೆಂಟ್ ಕ್ರಿಯೇಟರ್ ಯುವತಿ ಆತ್ಮಹತ್ಯೆ
ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಅಪಘಾತದಲ್ಲಿ ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂಬವರು ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವಾಸಕ್ಕಾಗಿ ಗೋವಾಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ