ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್
ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಇನ್ನೂ ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಹವೆ ಹೆಚ್ಚಳವಾಗಲಿದೆ. ಭಾರತದ ಹಲವು ರಾಜ್ಯಗಳಿಗೆ ಅಧಿಕ ತಾಪಮಾನದ ಬಿಸಿ ತಟ್ಟಲಿದ್ದು, ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಉಷ್ಣ ಹವೆಯಿದ್ದರೂ ಕೂಡ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ನೆಲಮಂಗಲ| ಗ್ಯಾಸ್ ಲೀಕೇಜ್‌ನಿಂದ ಹೊತ್ತಿ ಉರಿದ ಬೆಂಕಿ – ಇಬ್ಬರು ಸಾವು