ರಾಯಚೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yediyurappa) ಕುಟುಂಬ ಸಮೇತರಾಗಿ ಮಂತ್ರಾಲಯ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದರು.ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದವನ ಹತ್ಯೆ ಕೇಸ್ – ಮೂವರು ಪೊಲೀಸರು ಸಸ್ಪೆಂಡ್
ತಮ್ಮ ಮೊಮ್ಮಗ, ಸಂಸದ ಬಿವೈ ರಾಘವೇಂದ್ರ ಅವರ ಮಗನ ಮದುವೆ ಆಮಂತ್ರಣ ನೀಡಲು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಆಗಮಿಸಿದ್ದರು. ಈ ವೇಳೆ ರಾಯರ ವೃಂದಾವನ, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರನ್ನು ಭೇಟಿಯಾಗಿ ಮೊಮ್ಮಗನ ಮದುವೆ ಆಹ್ವಾನಿಸಿದರು. ಈ ವೇಳೆ ಶ್ರೀಗಳು ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.ಇದನ್ನೂ ಓದಿ: ಆಯ್ಕೆ ಮಾಡಿದ್ದು 4, ಟಾರ್ಗೆಟ್ 1 – ದಾಳಿಗೆ ಪಕ್ಕಾ ಪ್ಲ್ಯಾನ್ ಮಾಡಿದ್ದ ಉಗ್ರರು