Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ

Public TV
2 Min Read
Mangaluru Suhas Shetty Murder

-ಗುದ್ದಿದ ರಭಸಕ್ಕೆ ಸಲೂನ್‌ ಶಾಪ್‌ಗೆ ನುಗ್ಗಿದ ಕಾರು

ಮಂಗಳೂರು: ಬಜ್ಪೆ ಕಿನ್ನಿಪದವು (Bajpe Kinnipadavu) ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty)  ಸ್ನೇಹಿತರೊಂದಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು. ನಂತರ ಮೀನಿನ ಟೆಂಪೋವನ್ನು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಸಲೂನ್‌ಗೆ ನುಗ್ಗಿದೆ. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಾರ್ವಜನಿಕ ರಸ್ತೆಯಲ್ಲೇ ಸುಹಾಸ್‌ನನ್ನು ಬರ್ಬರವಾಗಿ ಕೊಲೆಗೈದು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ

Hindu activist suhas shetty brutally murdered in Bajpe Mangaluru

ಘಟನೆ ಬಳಿಕ ಸುಹಾಸ್‌ನನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ಬಳಿಕ ಆಸ್ಪತ್ರೆ ಮುಂಭಾಗ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಅಲ್ಲದೇ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಭರತ್ ಶೆಟ್ಟಿ ಕೂಡ ಆಗಮಿಸಿದ್ದಾರೆ. ಸದ್ಯ ಸುಹಾಸ್ ಪೋಷಕರು ಬೆಳ್ತಂಗಡಿಯಲ್ಲಿದ್ದಾರೆ. ಸುಹಾಸ್ ಶೆಟ್ಟಿ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರನ್ನು ಹೊಂದಿದ್ದ. ಇದನ್ನೂ ಓದಿ: ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯ – ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

ಘಟನೆ ಬಳಿಕ ಮಂಗಳೂರಿನ ಹಲವೆಡೆ ಪೊಲೀಸರು ನಾಕಾ ಬಂದಿ ಹಾಕಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಸೂಚನೆ ನೀಡಲಾಗಿದೆ. ಅಲ್ಲದೇ ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಪ್ರೇಮ ವಿವಾಹವಾದ ಹಿಂದೂ, ಮುಸ್ಲಿಮ್‌ ಜೋಡಿ – ಈಗ ರಕ್ಷಣೆಗೆ ಪೊಲೀಸರ ಮೊರೆ

ಘಟನೆ ಸಂಬಂಧ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ರಾತ್ರಿ 8:30ರ ಸುಮಾರಿಗೆ ರೌಡಿಶೀಟರ್ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ಆಗಿದೆ. ಇನ್ನೋವಾ ಕಾರಿನಲ್ಲಿ ಬರುತ್ತಿದ್ದ ಸುಹಾಸ್ ಶೆಟ್ಟಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಶೆಟ್ಟಿ ಸಾವನಪ್ಪಿದ್ದಾರೆ. ಸುಹಾಸ್ ಜೊತೆ ಇದ್ದ ಸ್ನೇಹಿತರಿಗೂ ಗಾಯವಾಗಿದೆ. ದುಷ್ಕರ್ಮಿಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು. ಪ್ರತಿಕಾರದ ಹತ್ಯೆ ಎಂಬುದು ತನಿಖೆ ಬಳಿಕ ತಿಳಿಯಲಿದೆ ಎಂದರು. ಇದನ್ನೂ ಓದಿ: ಯುದ್ಧ ಭೀತಿ – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 10 ದಿನ ಮದರಸಾ ಬಂದ್!

ಸುಹಾಸ್ ಶೆಟ್ಟಿ ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ ಸುಹಾಸ್ ಶೆಟ್ಟಿಗೆ ಜೈಲಿನಿಂದ ಹೊರ ಬಂದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಇದನ್ನೂ ಓದಿ: Bengaluru | ಮಳೆಗೆ ಆಟೋದ ಮೇಲೆ ಬಿದ್ದ ಮರ – ಚಾಲಕ ಸಾವು

Share This Article