ನೆಲಮಂಗಲ | ಆಟೋಗೆ KSRTC ಬಸ್ ಡಿಕ್ಕಿ – ಮೂವರು ಸಾವು

Public TV
1 Min Read
Nelamangala Auto KSRTC Bus Accident

ನೆಲಮಂಗಲ: ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ (KSRTC) ಆಟೋಗೆ (Auto) ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ (Nelamangala) ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಬಳಿ ನಡೆದಿದೆ.

ಹಾಸನ – ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಶ್ರೀನಿವಾಸ್ ಹಾಗೂ ಪುಟ್ಟಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 13 ವರ್ಷದ ವರ್ಷಿಣಿ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಲೇಖನ ಎಂಬ ಬಾಲಕಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ನಾಗರತ್ನಮ್ಮ ಹಾಗೂ ವೆಂಕಟೇಶ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬರೀ ಭಾಷಣ ಮಾಡ್ಕೊಂಡು ಕೂತ್ರೆ ಆಗಲ್ಲ, ನಮ್ಮನ್ನ ಕೆಣಕಿದವರಿಗೆ ತಕ್ಕ ಉತ್ತರ ಕೊಡ್ಬೇಕು: ಖರ್ಗೆ

Nelamangala Auto KSRTC Bus Accident 1

ಬೆಂಗಳೂರು ಮಾರ್ಗದಲ್ಲಿ ಹೊರನಾಡಿಗೆ ಸಂಚರಿಸುತ್ತಿದ್ದ ಬಸ್ ನೆಲಮಂಗಲ ಬಳಿ ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತ ಶ್ರೀನಿವಾಸ್ ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿ ನೌಕರನಾಗಿದ್ದು, ವಾಟರ್ ಮೆನ್ ಕೆಲಸ ಮಾಡಿಕೊಂಡು ಹೊಟ್ಟೆಪಾಡಿಗಾಗಿ ಆಟೋ ಓಡಿಸುತ್ತಿದ್ದರು. ಇದನ್ನೂ ಓದಿ: ಜಲ ಮಾರ್ಗ ಬಂದ್ – ಪಾಕ್‌ಗೆ ಹೋಗುವ, ಬರುವ ಹಡಗುಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಭಾರತ

ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ಟ್ರಾಫಿಕ್ ಪೊಲೀಸರು ಹರಸಾಹಸಪಟ್ಟರು. ಮೃತರು ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಬರುತ್ತಿದ್ದರು ಎನ್ನಲಾಗಿದೆ. ಒಂದೇ ಕುಟುಂಬಕ್ಕೆ ಸೇರಿದ ಆರು ಜನ ಈ ಆಟೋದಲ್ಲಿ ಸಂಚಾರ ಮಾಡುತ್ತಿದ್ದರು. ಬಸ್ ಚಾಲಕನ ವೇಗದ ಅಜಾಗರೂಕ ಚಾಲನೆಯಿಂದ ಈ ಅವಘಡ ನಡೆದಿದೆ ಎನ್ನಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Mangaluru | ಕರಾವಳಿಯಲ್ಲಿ ನಿಲ್ಲದ ಪ್ರತೀಕಾರದ ಹತ್ಯೆ

Share This Article