ಬೆಂಗಳೂರು: ಸಾಂಪ್ರದಾಯಿಕ ಎದುರಾಳಿ ಸಿಎಸ್‌ಕೆ (CSK) ವಿರುದ್ಧ ನಡೆಯುತ್ತಿರುವ ಪಂದ್ಯವು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ಬೆಂಕಿ – ಬಿರುಗಾಳಿಯ ಹಗ್ಗಜಗ್ಗಾಟವು ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಈ ಪಂದ್ಯದಲ್ಲಿ ಆರಂಭದಿಂದಲೇ ಅಬ್ಬರಿಸಿ ಬೊಬ್ಬಿರಿದ ವಿರಾಟ್ ಕೊಹ್ಲಿ (Virat Kohli) ಸಿಕ್ಸರ್‌ನಿಂದಲೇ ವಿಶೇಷ ದಾಖಲೆಯೊಂದನ್ನ ಬರೆದಿದ್ದಾರೆ.
Back 2️⃣ Back. 🥶
— Royal Challengers Bengaluru (@RCBTweets) May 3, 2025
ಹೌದು. 18 ಆವೃತ್ತಿಗಳಿಂದಲೂ ಒಂದೇ ತಂಡದಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ, ಆರ್‌ಸಿಬಿ ಪರ 304 ಸಿಕ್ಸರ್‌ಗಳನ್ನ ಸಿಡಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಟಿ20ಯಲ್ಲಿ ತಂಡವೊಂದರ ಪರ 300 ಸಿಕ್ಸರ್ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಿಎಸ್‌ಕೆ ವಿರುದ್ಧ ಪಂದ್ಯದಲ್ಲಿ ಖಲೀಲ್ ಅಹ್ಮದ್ ಅವರ ಬೌಲಿಂಗ್‌ಗೆ 85 ಮೀಟರ್ ಸಿಕ್ಸರ್ ಸಿಡಿಸುವ ಮೂಲಕ ಈ ಮೈಲುಗಲ್ಲು ತಲುಪಿದ್ದಾರೆ. ಇನ್ನೂ ಮಾಜಿ ಕ್ರಿಕೆಟಿಗ ಕ್ರಿಸ್‌ಗೇಲ್ 263 ಸಿಕ್ಸರ್ ಸಿಡಿಸಿ ಈ ಸಾಧನೆ ಮಾಡಿದ 2ನೇ ಆಟಗಾರನಾದ್ರೆ, ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್) 262 ಸಿಕ್ಸರ್, ಕೀರನ್ ಪೋಲಾರ್ಡ್ (ಮುಂಬೈ) 258 ಸಿಕ್ಸರ್, ಎಂ.ಎಸ್ ಧೋನಿ (ಸಿಎಸ್‌ಕೆ) 257 ಸಿಕ್ಸರ್ ಸಿಡಿಸಿ ಕ್ರಮವಾಗಿ 3, 4, 5ನೇ ಸ್ಥಾನಗಳಲ್ಲಿದ್ದಾರೆ.
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಟಾಪ್:
ಅಲ್ಲದೇ ಈ ಆವೃತ್ತಿಯಲ್ಲಿ ಸ್ಫೋಟಕ ಪ್ರದರ್ಶನ ನೀಡುತ್ತಿರುವ ಕಿಂಗ್ ಕೊಹ್ಲಿ 505 ರನ್ ಗಳಿಸಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಜೊತೆಗೆ ಐಪಿಎಲ್‌ನಲ್ಲಿ 8ನೇ ಬಾರಿಗೆ 500ಕ್ಕೂ ಹೆಚ್ಚು ರನ್ ಗಳಿಸಿದ ಮೊದಲಿಗನಾಗಿದ್ದಾರೆ. 7 ಬಾರಿ 500ಕ್ಕೂ ಹೆಚ್ಚು ರನ್ ಗಳಿಸಿದ ಡೇವಿಡ್ ವಾರ್ನರ್ 2ನೇ ಸ್ಥಾನದಲ್ಲಿದ್ದಾರೆ.