‘ಹಿಟ್ಲರ್ ಕಲ್ಯಾಣ’ (Hitler Kalyana) ಸೀರಿಯಲ್ ಖ್ಯಾತಿಯ ಶೌರ್ಯ ಶಶಾಂಕ್ (Shaurya Shashank) ಅವರು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ದಿಶಾ ಜಾದವ್ ಎಂಬುವವರೊಂದಿಗೆ ನಟ ಎಂಗೇಜ್ ಆಗಿದ್ದಾರೆ. ಇದನ್ನೂ ಓದಿ:ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್
ಬೆಂಗಳೂರಿನಲ್ಲಿ ಸಾಂಪ್ರದಾಯಿಕವಾಗಿ ನಟನ ನಿಶ್ಚಿತಾರ್ಥ (Engagement) ಕಾರ್ಯಕ್ರಮ ಜರುಗಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ದಿಶಾ ಜಾದವ್ ಮತ್ತು ಶೌರ್ಯ ಶಶಾಂಕ್ ಉಂಗುರ ಬದಲಿಸಿಕೊಂಡಿದ್ದಾರೆ. ಇದೀಗ ಈ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.
ಬೆಂಗಳೂರಿನ ಹುಡುಗಿ ದಿಶಾ ಜೊತೆ ಎಂಗೇಜ್ ಆಗಿರುವ ಶೌರ್ಯ ಸದ್ಯದಲ್ಲೇ ಮದುವೆ ದಿನಾಂಕದ ಬಗ್ಗೆ ರಿವೀಲ್ ಮಾಡಲಿದ್ದಾರೆ. ಇದನ್ನೂ ಓದಿ:17 ವರ್ಷದ ಬಳಿಕ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್
ಅಂದಹಾಗೆ, ಪ್ರಸ್ತುತ ‘ಭಾಗ್ಯಲಕ್ಷ್ಮಿ’ ಸೀರಿಯಲ್‌ನಲ್ಲಿ ಶೌರ್ಯ ನಟಿಸುತ್ತಿದ್ದಾರೆ. ಈ ಹಿಂದೆ ‘ಹಿಟ್ಲರ್ ಕಲ್ಯಾಣ’ ಸೀರಿಯಲ್‌ನಲ್ಲಿ ನೆಗೆಟಿವ್ ಪೊಲೀಸ್ ದೇವ್ ಪಾತ್ರದಲ್ಲಿ ನಟಿಸಿದ್ದರು.