ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಕಾಲ ಕಳೆದಿದ್ದಾರೆ. ಇದೀಗ ಬಿಳಿ ಕುದುರೆಯೊಂದಿಗೆ ಕ್ಲಿಕ್ಕಿಸಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ವರುಣ್ ಧವನ್ ಸಿನಿಮಾಗೆ KGF ನಟಿ ಮೌನಿ ರಾಯ್ ಎಂಟ್ರಿ
ದರ್ಶನ್ ನಟನೆಯ ‘ಡೆವಿಲ್’ (Devil) ಶೂಟಿಂಗ್ ಹಾಗೂ ಪ್ರತಿ ಕಾರ್ಯಕ್ರಮದಲ್ಲಿಯೂ ಜೊತೆಯಾಗಿರುವ ವಿಜಯಲಕ್ಷ್ಮಿ ಬಿಡುವು ಸಿಕ್ಕ ಹಿನ್ನೆಲೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಖುಷಿಯಿಂದ ಕಾಲ ಕಳಿದ್ದಾರೆ. ಬಿಳಿ ಕುದುರೆ ಜೊತೆ ನಿಂತು ಖುಷಿಯಿಂದ ಪೋಸ್ ನೀಡಿದ್ದಾರೆ. ಅವರ ಈ ಫೋಟೋಗಳು ದರ್ಶನ್ ಫ್ಯಾನ್ಸ್ ಪೇಜ್‌ನಲ್ಲಿ ವೈರಲ್ ಆಗುತ್ತಿದೆ.
View this post on Instagram
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಅಥವಾ ಸಹೋದರ ದಿನಕರ್ ಜೊತೆಯಾಗಿರುತ್ತಾರೆ.
ಅಂದಹಾಗೆ, ‘ಡೆವಿಲ್’ ಸಿನಿಮಾದಲ್ಲಿ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ನಟಿಸುತ್ತಿದ್ದಾರೆ. ‘ತಾರಕ್’ ಡೈರೆಕ್ಟರ್ ಮಿಲನಾ ಪ್ರಕಾಶ್ ‘ಡೆವಿಲ್’ಗೆ ನಿರ್ದೇಶನ ಮಾಡುತ್ತಿದ್ದಾರೆ.