ನವದೆಹಲಿ: ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎಪಿ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಪ್ರಧಾನ ಮಂತ್ರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ನಡುವಿನ ಪ್ರತ್ಯೇಕ ಸಭೆಯ ನಂತರ ವಾಯುಪಡೆಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಕಳೆದ ವಾರ ಪ್ರಧಾನಿಯವರು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರನ್ನೂ ಭೇಟಿ ಮಾಡಿದ್ದರು. ಇದನ್ನೂ ಓದಿ: ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ
ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸಭೆಯಲ್ಲಿ ಮೋದಿ ತಿಳಿಸಿದ್ದಾರೆ. ಇದರ ಜೊತೆಗೆ ರಕ್ಷಣಾ ನಾಯಕತ್ವಕ್ಕೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ.
ಹಿಂದಿನ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು ಉಪಸ್ಥಿತರಿದ್ದರು. ಇದನ್ನೂ ಓದಿ: ಪಾಕ್‌ಗೆ ಸೇನಾ ಮಾಹಿತಿ ರವಾನೆ – ಇಬ್ಬರು ಅರೆಸ್ಟ್