– ಸುಹಾಸ್ ಹತ್ಯೆಗೆ ಸರ್ಕಾರದ ಹಣದ ಬಗ್ಗೆ ಚರ್ಚಿಸಿ ಕ್ರಮ
– ಬಿಜೆಪಿ ಜೊತೆ ವಿಲೀನಕ್ಕೂ ಮುನ್ನ ಮೋದಿ ಬಗ್ಗೆ ದೇವೇಗೌಡ್ರು ಎನಂತಿದ್ರು?
ಹಾವೇರಿ: ಸಮಾಜಘಾತಕ ಶಕ್ತಿಗಳನ್ನು (Anti Social Forces) ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ (Special Task Force) ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ‘ಟೋಬಿ’ ನಟಿಗೆ ಬೇಡಿಕೆ- ಸೌತ್ ಸಿನಿಮಾಗಳಲ್ಲಿ ಚೈತ್ರಾ ಆಚಾರ್ ಬ್ಯುಸಿ
ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಿತ್ತು. ಅದೇ ಪರಿಹಾರದ ಹಣದಲ್ಲಿ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ, ಈ ಬಗ್ಗೆ ನನಗೆ ತಿಳಿದಿಲ್ಲ. ದಿನೇಶ್ ಗುಂಡೂರಾವ್ ಹಾಗೂಪರಮೇಶ್ವರ್ ಇಬ್ಬರೂ ಮಂಗಳೂರಿಗೆ (Mangaluru) ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು, ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡರ (H.D Devegowda) ಹೇಳಿಕೆ ವಿಚಾರವಾಗಿ, ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು? ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ಅವರಿಗೆ ಇದೆ ಎಂದು ಕುಟುಕಿದರು. ಇದನ್ನೂ ಓದಿ: ಅಂಬೇಡ್ಕರ್‌ರನ್ನ ಸೋಲಿಸಿದ್ದು ಕಾಂಗ್ರೆಸ್ ಅಲ್ಲ ಎಂದು ಸಾಬೀತಾದ್ರೆ, ರಾಜೀನಾಮೆಗೆ ಸಿದ್ಧ: ಛಲವಾದಿ ಸವಾಲ್