ಹಾಸನ: ಕಾಶ್ಮೀರದ (Kashmir) ವಿಚಾರದಲ್ಲಿ ಪ್ರಧಾನಮಂತ್ರಿಗಳು ಬಹಳ ಬಿಗಿ ಕ್ರಮ ತೆಗೆದುಕೊಂಡಿದ್ದಾರೆ. ಈ ವಿಷಯದಲ್ಲಿ ರಾಷ್ಟ್ರದ ಎಲ್ಲಾ ರಾಜಕೀಯ ಪಕ್ಷಗಳು ಐಕ್ಯತೆಯನ್ನು ತೋರಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H D Devegowda) ಹೇಳಿದರು.
ಅವರು ಹಾಸನ (Hassan) ಜಿಲ್ಲೆಯ ದ್ಯಾಪಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ ಉದ್ಘಾಟನಾ ಮಹೋತ್ಸವ ಹಾಗೂ ಮಹಾಕುಂಭಾಭಿಷೇಕ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ 150 ಕೋಟಿ ಜನ, ಏಕಮುಖವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ತೀರ್ಮಾನಕ್ಕೆ ಬದ್ಧರಾಗಿರಬೇಕು. ಆಗ ಮಾತ್ರ ಇಂತಹ ದುರ್ಘಟನೆ ನಡೆಯುವುದಿಲ್ಲ ಎಂದರು. ಇದನ್ನೂ ಓದಿ: ಹೌತಿ ಕ್ಷಿಪಣಿ ದಾಳಿ – ಮೇ 6ರ ವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನಯಾನ ಬಂದ್
ಪಹಲ್ಗಾಮ್‌ನಲ್ಲಿ (Pahalgam) 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ. ಇದರಲ್ಲಿ ಒಬ್ಬ ವಿದೇಶಿಗ. ನಮ್ಮ ದೇಶದ 25 ಜನರು ಇದ್ದು, ನಿಷ್ಕರುಣೆಯಿಂದ ಅವರನ್ನು ಹತ್ಯೆ ಮಾಡಿದಂತಹ ಉಗ್ರಗಾಮಿಗಳನ್ನು ಸಂಪೂರ್ಣವಾಗಿ ನಾಶ ಮಾಡುವವರೆಗೂ ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ. ಈ ವಿಷಯದಲ್ಲಿ ನನ್ನ ಅನುಭವದಿಂದ ಅಭಿಪ್ರಾಯವನ್ನು ತಿಳಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್
ಇದು ಸೂಕ್ಷ್ಮವಾದ ವಿಚಾರ. ಇದರ ಕುರಿತು ಕೇಂದ್ರ ಕೈಗೊಳ್ಳುವ ಕ್ರಮಕ್ಕೆ ನನ್ನದು, ನನ್ನ ಪಕ್ಷದ್ದು ಪೂರ್ಣ ಬೆಂಬಲವಿದೆ ಎಂದು ಈಗಾಗಲೇ ಹೇಳಿದ್ದೇನೆ. ಮುಂದೆ ಕೂಡ ಏನು ಕ್ರಮ ತೆಗೆದುಕೊಳ್ಳುತ್ತಾರೋ ಆ ಕ್ರಮಕ್ಕೆ ಇಡೀ ದೇಶ ಪಕ್ಷ ಭೇದ ಇಲ್ಲದೇ ಎಲ್ಲರೂ ಒಗ್ಗಟ್ಟಾಗಿ ಬೆಂಬಲ ನೀಡಬೇಕು. ಮುಂದೆ ಇಂತಹ ದುಷ್ಕ್ರತ್ಯ ನಡೆಯಬಾರದು. ಅವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಮಂತ್ರಿಗಳು ಪ್ರತಿಜ್ಞೆ ಮಾಡಿದ್ದು, ಅವರ ಹಿಂದೆ ನಿಲ್ಲುತ್ತೇವೆ ಎಂದರು. ಇದನ್ನೂ ಓದಿ: ಐಪಿಎಲ್‌ನಲ್ಲಿ ಆರ್‌ಸಿಬಿ ಗೆಲುವು – ರೊಚ್ಚಿಗೆದ್ದ ಸಿಎಸ್‌ಕೆ ಅಭಿಮಾನಿಗಳಿಂದ ಹಾಸ್ಟೆಲ್ ಸಾಮಗ್ರಿ ಧ್ವಂಸ
ಮೊದಲು ಕಾಂಗ್ರೆಸ್ (Congress) ನಾಯಕರು ಸಹಮತವನ್ನು ವ್ಯಕ್ತಪಡಿಸಿದ್ದರು. ಮಧ್ಯೆ ಸ್ವಲ್ಪ ಒಡಕು ಶಬ್ದ ಬಂದ ಮೇಲೆ ಪುನಃ ಅವರು ಈ ವಿಷಯದಲ್ಲಿ ಐಕ್ಯತೆ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ ಎಂದು ಹೇಳಿದರು.