– ಮೋದಿ ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತೆ
– 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದ ಸಚಿವ
ನವದೆಹಲಿ: ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ. ನಾನು ನಿಮಗೆ ಭರವಸೆ ನೀಡುತ್ತೇನೆ ಮೋದಿ (Modi) ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪಾಕ್ ವಿರುದ್ಧ ಮತ್ತೆ ಗುಡುಗಿದ್ದಾರೆ.
ದೆಹಲಿಯ ಬಕ್ಕರ್ವಾಲಾ ಆನಂದ್ ಧಾಮ್ ಆಶ್ರಮದಲ್ಲಿ ಸನಾತನ ಸಂಸ್ಕೃತಿ ಜಾಗರಣ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ (Pakistan) ಎಚ್ಚರಿಕೆ ನೀಡಿದರು ಮತ್ತು ರಕ್ಷಣಾ ಸಚಿವರಾಗಿ, ನನ್ನ ಸೈನಿಕರೊಂದಿಗೆ ದೇಶದ ಗಡಿಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಜವಾಬ್ದಾರಿಯಾಗಿದೆ. ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಏನು ಬೇಕಾದರೂ ಆಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮೋದಿಯ ಪ್ರತೀಕಾರದ ಶಪಥಕ್ಕೆ ಬೆವರಿದ ಪಾಕ್ – ಭಾರತಕ್ಕೆ ಪರಮಾಣು ದಾಳಿಯ ಗೊಡ್ಡು ಬೆದರಿಕೆ
ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ. ನೀವೆಲ್ಲರೂ ನಮ್ಮ ಪ್ರಧಾನಿಯನ್ನ ಚೆನ್ನಾಗಿ ತಿಳಿದಿದ್ದೀರಿ, ಅವರ ಕಾರ್ಯಶೈಲಿ, ದೃಢಸಂಕಲ್ಪದ ಬಗ್ಗೆಯೂ ನಿಮಗೆ ಚೆನ್ನಾಗಿ ತಿಳಿದಿದೆ. ಹಾಗಾಗಿ ನಿಮಗೆ ಭರವಸೆ ನೀಡುತ್ತೇನೆ, ಮೋದಿ ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹೌತಿ ಕ್ಷಿಪಣಿ ದಾಳಿ – ಮೇ 6ರ ವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನಯಾನ ಬಂದ್
2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ:
ಮುಂದುವರಿದು ಮಾತನಾಡಿದ ರಕ್ಷಣಾ ಸಚಿವರು, 2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಪ್ರಧಾನಿ ಮೋದಿ ಹೊಂದಿದ್ದಾರೆ. ಇದು ಸಾಮಾನ್ಯ ಗುರಿಯಲ್ಲ. ಆದ್ರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಹೆಚ್ಚಾಗಿದೆ ಎಂಬ ಸತ್ಯವನ್ನು ನೀವೆಲ್ಲರೂ ಒಪ್ಪಿಕೊಳ್ಳೋದ್ರಿಂದ ಈ ಗುರಿ ಸಾಧಿಸಬಹುದು. ಭಾರತದ ದುರ್ಬಲ ದೇಶ, ಬಡವರ ದೇಶ ಅನ್ನುತ್ತಿದ್ದ ದೇಶಗಳೆಲ್ಲವು ಇಂದು ಭಾರತದ ಮಾತನ್ನು ಕಿವಿಗೊಟ್ಟು ಕೇಳುತ್ತವೆ ಎಂದು ಹೇಳಿದರು.
25 ಟೂರಿಸ್ಟ್ ಗೈಡ್‌ಗಳ ವಿಚಾರಣೆ:
ಸದ್ಯ ಪಹಲ್ಗಾಮ್ ದಾಳಿಯ ಕುರಿತು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಅನಂತನಾಗ್‌ನಲ್ಲಿ 25ಕ್ಕೂ ಹೆಚ್ಚು ಸ್ಥಳೀಯ ಪ್ರವಾಸಿ ಮಾರ್ಗದರ್ಶಿಗಳನ್ನು ವಿವಾರಣೆಗೆ ಒಳಪಡಿಸಿದೆ. ಜೊತೆಗೆ ಉಗ್ರರಿಗೆ ಸಹಾಯ ಮಾಡಿದ ಭೂಗತ ಕಾರ್ಮಿಕರನ್ನು ಪತ್ತೆಹಚ್ಚು ಕೆಲಸಕ್ಕೂ ಎನ್‌ಐಎ ಮುಂದಾಗಿದೆ. ಇದನ್ನೂ ಓದಿ: ನನಗೆ ನ್ಯಾಯ ಬೇಕು – ಪಾಕ್ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ