– ಪಾಕ್, ಬಾಂಗ್ಲಾ ಗಡಿಯಲ್ಲಿ ಪ್ರಾದೇಶಿಕ ಕಚೇರಿ
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹೆಚ್ಚಾಗುತ್ತಿದ್ದಂತೆ ಇದೀಗ ಭಾರತದ ಗಡಿ ಭದ್ರತಾ ಪಡೆಗೆ (BSF) ಇನ್ನುಷ್ಟು ಬಲ ಬಂದಿದ್ದು, 16 ಹೊಸ ಬೆಟಾಲಿಯನ್‌ಗಳು (battalions) ಸೇರ್ಪಡೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.
ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗುತ್ತಿದ್ದು, ಬಿಎಸ್‌ಎಫ್‌ಗೆ 16 ಹೊಸ ಬೆಟಾಲಿಯನ್‌ಗಳು ಮತ್ತು ಭಾರತ ಪಾಕ್ ಮತ್ತು ಭಾರತ ಬಾಂಗ್ಲಾ ಗಡಿಯಲ್ಲಿ ಒಂದೊಂದರಂತೆ ಎರಡು ಹೊಸ ಪ್ರಾದೇಶಿಕ ಪ್ರಧಾನ ಕಚೇರಿಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿದೆ. ಜೊತೆಗೆ ಬೆಟಾಲಿಯನ್‌ಗಳಲ್ಲಿ ಸುಮಾರು 17,000 ಹೊಸ ಸೈನಿಕರನ್ನು ನೇಮಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು 2020-21ರಲ್ಲಿ ಬಿಎಸ್‌ಎಫ್ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.ಇದನ್ನೂ ಓದಿ: 30 ನಿಮಿಷ ಲೈಟ್ ಆಫ್ – ಪಂಜಾಬ್ ಗಡಿಯಲ್ಲಿ ಸೇನೆಯಿಂದ ಮಾಕ್ ಡ್ರಿಲ್
ಈ ಕುರಿತು ಭದ್ರತಾ ಪಡೆ ಮಾಹಿತಿ ನೀಡಿದ್ದು, ಪ್ರಸ್ತುತ ಈ ಅರೆಸೇನಾಪಡೆಯು 193 ಬೆಟಾಲಿಯನ್‌ಗಳನ್ನು ಹೊಂದಿದ್ದು, ಒಂದು ಬೆಟಾಲಿಯನ್ 1,000 ಮಂದಿಗೂ ಹೆಚ್ಚು ಯೋಧರನ್ನು ಒಳಗೊಂಡಿದೆ. ಕೇಂದ್ರ ಸರ್ಕಾರ (Central Government) ಅನುಮೋದನೆ ನೀಡುತ್ತಿದ್ದಂತೆ ಬಿಎಸ್‌ಎಫ್ ಮಹಿಳಾ ಹಾಗೂ ಪುರುಷ ಸಿಬ್ಬಂದಿಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದೆ.
ಕಳೆದ ವರ್ಷ ಬಾಂಗ್ಲಾದೇಶದಲ್ಲಿ (Bangladesh) ಶೇಖ್ ಹಸೀನಾ ಸರ್ಕಾರದ ಪತನ ಹಾಗೂ ಏ.22ರಂದು ನಡೆದ ಪಹಲ್ಗಾಮ್ ಉಗ್ರರ ದಾಳಿಯ ನಂತರ ಭದ್ರತಾ ದೃಷ್ಟಿಯಿಂದ ಬಿಎಸ್‌ಎಫ್‌ಗೆ ಬಲ ಹೆಚ್ಚಿಸುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆ ಸೇರಿದಂತೆ ಕೆಲವು ಅಂತಿಮ ಅನುಮೋದನೆಗಳು ಬಾಕಿಯಿದ್ದು, ಶೀಘ್ರದಲ್ಲೇ ಮಂಜೂರಾಗುವ ನಿರೀಕ್ಷೆಯಿದೆ.
ಜಮ್ಮು ಮತ್ತು ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಭದ್ರತೆಯನ್ನು ಬಲಪಡಿಸಲು ಜಮ್ಮುವಿನಲ್ಲಿ ಒಂದು ವಲಯ ಹಾಗೂ ಬಾಂಗ್ಲಾದೇಶ ಗಡಿಯ ಉತ್ತಮ ಕಣ್ಗಾವಲುಗಾಗಿ ಎರಡನೇ ವಲಯ ಮಿಜೋರಾಂನಲ್ಲಿ ಸ್ಥಾಪನೆಯಾಗಲಿದೆ ಎಂದು ತಿಳಿಸಿದೆ.ಇದನ್ನೂ ಓದಿ: ಇಸ್ಲಾಂ ಇರುವವರೆಗೂ ಭಯೋತ್ಪಾದನೆ ಜೀವಂತ: ತಸ್ಲಿಮಾ ನಸ್ರೀನ್