ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧರಾಗಿದ್ದೇವೆ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಗಳ (Scheduled Caste) ಸಮಗ್ರ ಸಮೀಕ್ಷೆ-2025 ಕುರಿತಂತೆ ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ ಎಂದರು. ಇದನ್ನೂ ಓದಿ: ಒಳ ಮೀಸಲಾತಿಗಾಗಿ ಇಂದಿನಿಂದ ಸಮೀಕ್ಷೆ, 2 ತಿಂಗಳಲ್ಲಿ ಜಾರಿ – ಯಾವ ಹಂತದಲ್ಲಿ ಏನು?
ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು, ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ. 2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1 ಆಗಸ್ಟ್ 2024ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರಿದೆವು ಎಂದು ಹೇಳಿದರು. ಇದನ್ನೂ ಓದಿ: ಕೂದಲೆಳೆ ಅಂತರದಲ್ಲಿ ಪಾರಾದ DMK MP ರಾಜಾ
ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ನುಡಿದರು.
ಇಂದಿನಿಂದ 17ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10ರಿಂದ 12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ ಇಂದಿನಿಂದ ಮೇ 17ರ ವರೆಗೆ ಮತ್ತು ಮೇ 19ರಿಂದ 21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು ಎಂದು ಹೇಳಿದರು.
ಮೂರನೇ ಹಂತದಲ್ಲಿ ಮೇ.19ರಿಂದ 22ರವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. 3 ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡ್ತಾರೆ. ಒಟ್ಟು 60 ದಿನ ಸಮಯವಕಾಶ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್‌ಗೆ ಬಸವಣ್ಣನವರ ಹೆಸರು ಹೇಳುವ ಯೋಗ್ಯತೆ ಇಲ್ಲ – ಮಾವಳ್ಳಿ ಶಂಕರ್
ಮೊಬೈಲ್ ಆಪ್
ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30ರಿಂದ ಸಂಜೆ 6:30ರ ವರೆಗೆ ಮೊಬೈಲ್ ಆಪ್‌ನಲ್ಲಿ ಅವಕಾಶ ಮಾಡಲಾಗಿರುತ್ತದೆ. ಇದನ್ನು ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದರು.
ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದವರ ವಿರುದ್ಧ ಕ್ರಮ: ಬೋಸರಾಜು
ಈ ವೇಳೆ ಸಚಿವ ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕಿ ರೂಪ ಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.