ರಾಯಚೂರು: ಮನೆಗೆ ತಡವಾಗಿ ಬರುತ್ತಿದ್ದ ಕಾರಣ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಯುವಕ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ (Raichuru) ಶಕ್ತಿನಗರದಲ್ಲಿ ನಡೆದಿದೆ.
ಮೃತ ಯುವಕನನ್ನು ಸುದೀಪ್ ಕುಮಾರ್(21) ಎಂದು ಗುರುತಿಸಲಾಗಿದ್ದು, ಖಾಸಗಿ ಫಾರ್ಮಾ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.ಇದನ್ನೂ ಓದಿ: ಯುದ್ಧ ನಡೆದರೆ ನಾವು ಭಾರತದ ಜೊತೆ ನಿಲ್ಲಬೇಕು – ಪಾಕ್‌ನಲ್ಲಿರುವ ಪಶ್ತೂನ್ ಮುಸ್ಲಿಮರಿಗೆ ಕರೆ
ಸುದೀಪ್ ಪ್ರತಿ ನಿತ್ಯ ಮನೆಗೆ ತಡವಾಗಿ ಬರುತ್ತಿದ್ದ. ಹೀಗಾಗಿ ಆತನ ಪೋಷಕರು ಬೈದು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದಿದ್ದ ಸುದೀಪ್ ಮದ್ಯದ ಅಮಲಿನಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು, ಮನೆಯಮುಂದಿನ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸದ್ಯ ಘಟನೆ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್