ಹಾವೇರಿ: ಹೊಸ ಬೈಕ್ ಖರೀದಿಸಿ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ(Haveri) ತಾಲೂಕಿನ ಗೌರಾಪುರ(Gowarapura) ಗ್ರಾಮದಲ್ಲಿ ನಡೆದಿದೆ.
ಹಾನಗಲ್ ತಾಲೂಕಿನ ವರ್ದಿ ಗ್ರಾಮದ ನಿವಾಸಿ ನಾಗರಾಜ್ ಪವಾಡಿ(35) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | ರೌಡಿಶೀಟರ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ ಕೊಲೆ
ನಾಗರಾಜ್ ಸೋಮವಾರ ಹೊಸ ಬೈಕ್ ಖರೀದಿಸಿ ಮನೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಪೊಲೀಸ್ ವಶಕ್ಕೆ
ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ(Haveri Rural Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.