Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಸೆಂಬರ್ ವೇಳೆಗೆ ಕಾವೇರಿ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಸೆಂಬರ್ ವೇಳೆಗೆ ಕಾವೇರಿ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣ: ಡಿಕೆಶಿ

Bengaluru City

ಡಿಸೆಂಬರ್ ವೇಳೆಗೆ ಕಾವೇರಿ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣ: ಡಿಕೆಶಿ

Public TV
Last updated: May 5, 2025 8:00 pm
Public TV
Share
3 Min Read
DK Shivakumar 2
SHARE

ಮಂಡ್ಯ: ಈ ವರ್ಷದ ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ,‌ ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು (Cauvery Drinking Water Project) ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಭರವಸೆ ನೀಡಿದರು.

ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಿಸಲಾದ ಟನಲ್‌ ವೀಕ್ಷಿಸಿದೆ. 540 ಕೋಟಿ ರೂ. ವೆಚ್ಚದ ಈ ಯೋಜನೆಯು ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಿದೆ. pic.twitter.com/9E3os45JKC

— DK Shivakumar (@DKShivakumar) May 5, 2025

ಇಂದು ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಯ ಆರಂಭಿಕ ಘಟ್ಟದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಮಾತನಾಡಿದ ಅವರು 540 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದರು.

ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕಾವೇರಿ ನದಿ ಅಣೆಕಟ್ಟಿನಿಂದ ರಾಮನಗರ ಜಿಲ್ಲೆಯ ನಾನಾ ಕಡೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಿ, ಸ್ಥಳ ಪರಿಶೀಲಿಸಿದೆ.

ರಾಮನಗರ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಸಲುವಾಗಿ, 540 ಕೋಟಿ ರೂ. ವೆಚ್ಚದಲ್ಲಿ, ಕಾವೇರಿ ನದಿ… pic.twitter.com/zURHddp0Ea

— DK Shivakumar (@DKShivakumar) May 5, 2025

ಏಕೆ ಕೆಲಸ ವಿಳಂಬವಾಗುತ್ತಿದೆ ಏನಾದರೂ ಅಡೆತಡೆಗಳಿವೆಯೇ ಎಂದು ಅಧಿಕಾರಿಗಳು, ಯೋಜನೆಯ ಕಾಮಗಾರಿ ನಡೆಸುತ್ತಿರುವ ಹೈದರಾಬಾದಿನ ಮೆಘಾ ಇಂಜಿನಿಯರಿಂಗ್ ಸಂಸ್ಥೆಯ ಎಂಜಿನಿಯರ್ ಗಳ ಬಳಿ ಮಾಹಿತಿ ತಿಳಿದುಕೊಂಡರು. ಯೋಜನೆಯ ಪ್ರಗತಿ ಕುರಿತು ಸಮಗ್ರವಾದ ವಿವರಗಳನ್ನು ಪಡೆದರು. ಇದನ್ನೂ ಓದಿ: ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

ಇದಾದ ನಂತರ ಇಗ್ಗಲೂರು ಬ್ಯಾರೇಜ್ ವರೆಗೆ ನೀರು ಹರಿಸಲು ಕೊರೆಯುತ್ತಿರುವ ಸುರಂಗ ಹಾಗೂ ಅದರ ಲೈನಿಂಗ್ ಕಾಮಗಾರಿಯ ಗುಣಮಟ್ಟವನ್ನು ನಿಕಟಪೂರ್ವ ಸಂಸದರಾದ ಡಿ.ಕೆ ಸುರೇಶ್, ಶಾಸಕರಾದ ಸಿ.ಪಿ ಯೋಗೆಶ್ವರ್, ಕದಲೂರು ಉದಯ್, ವಿಧಾನಪರಿಷತ್ ಸದಸ್ಯರಾದ ಎಸ್.ರವಿ, ಸುಧಾಮ್‌ ದಾಸ್ ಜೊತೆ ವೀಕ್ಷಣೆ ಮಾಡಿದರು. ಇದನ್ನೂ ಓದಿ: ಕನ್ನಡಕ್ಕೆ ಅಪಮಾನ – ಸೋನು ನಿಗಮ್ ವಿರುದ್ಧ ಮಂಡ್ಯದಲ್ಲೂ ದೂರು

DK Shivakumar 3

ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುವುದೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ, ಅಗತ್ಯಕ್ಕೆ ತಕ್ಕಂತೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಯೋಜನೆಗೆ ಭೂಮಿ ನೀಡಿ ಸಹಕಾರ ನೀಡಿದ ರೈತರಿಗೆ ಉತ್ತಮ ಪರಿಹಾರ ನೀಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಯೋಜನೆಯಿಂದ ಅಂತರ್ಜಲ ಹೆಚ್ಚಳ ಸೇರಿದಂತೆ ಜಿಲ್ಲೆಯ ಜನರ ಕುಡಿಯುವ ನೀರಿನ ಬವಣೆ ತಪ್ಪಲಿದೆ” ಎಂದು ಹೇಳಿದರು.

ಯೋಜನೆಯ ವಿವರ
ಮಳೆಯ ಅಭಾವದ ಕಾರಣಕ್ಕೆ ಹಲವಾರು ವರ್ಷಗಳಿಂದ ತತ್ತರಿಸಿ ಹೋಗಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಸುಮಾರು 10.82 ಲಕ್ಷ ಜನರಿಗೆ ಹಾಗೂ 9.03 ಲಕ್ಷ ಜಾನುವಾರುಗಳಿಗೆ ಈ ಕುಡಿಯುವ ನೀರಿನ ಯೋಜನೆಯಿಂದ ಲಾಭವಾಗಲಿದೆ. 540 ಕೋಟಿ ರೂ. ವೆಚ್ಚದಲ್ಲಿ ಈ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ‌. ಮಳವಳ್ಳಿಯ ಬೆಳಕವಾಡಿ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸತ್ತೇಗಾಲ ಅಣೆಕಟ್ಟಿನಿಂದ 220 ಕ್ಯೂಸೆಕ್‌ ನೀರನ್ನು 180 ದಿನಗಳ ಕಾಲ ಇಗ್ಗಲೂರು ಬ್ಯಾರೇಜ್‌ಗೆ ಹರಿಸಲಾಗುತ್ತದೆ.

DK Shivakumar

ಸತ್ತೇಗಾಲ ಅಣೆಕಟ್ಟಿನಿಂದ ಇಗ್ಗಲೂರು ಬ್ಯಾರೇಜ್ ತನಕ ಸುಮಾರು ಸುಮಾರು 25.40 ಕಿ.ಮೀ ಉದ್ದ ಗುರುತ್ವಾಕರ್ಷಣೆಯ ಮೂಲಕ ನೀರನ್ನು ಹರಿಸುತ್ತಿರುವುದು ಈ ಯೋಜನೆಯ ವಿಶೇಷ. 12.5 ಕಿ.ಮೀ ಉದ್ದದ ವರೆಗೆ ಸುರಂಗ ಮಾರ್ಗ ನಂತರ 13.35 ಕಿ.ಮೀ ಉದ್ದ ಪೈಪ್ ಲೈನ್ ಇರಲಿದೆ. ಈ ಸುರಂಗ ಮಾರ್ಗವು 4 ಮೀ ಸುತ್ತಳತೆ ಹೊಂದಿದ್ದು ‘ಡಿ’ ಆಕಾರದಲ್ಲಿ ಇರಲಿದೆ. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಂಕಪಟ್ಟಿ ಗೋಲ್‌ಮಾಲ್: ಛಲವಾದಿ ನಾರಾಯಣಸ್ವಾಮಿ ಆರೋಪ

ನಂತರ ಏತ ನೀರಾವರಿ ಮೂಲಕ ಇಗ್ಗಲೂರು ಬ್ಯಾರೇಜ್ ನಿಂದ ಮೊಗೇನಹಳ್ಳಿ ಕೆರೆಗೆ, ಈ ಕೆರೆಯಿಂದ ಕಣ್ವ ಜಲಾಶಯ‌, ನಂತರ ಮಂಚನಬೆಲೆ ಹಾಗೂ ವೈ.ಜಿ.ಗುಡ್ಡ ಜಲಾಶಯಕ್ಕೆ ನೀರು ತುಂಬಿಸಲಾಗುವುದು. ಪ್ರಸ್ತುತ ಸುಮಾರು 11.33 ಕಿ.ಮೀ ವರೆಗೆ ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಂಡಿದ್ದು ಪ್ರಸ್ತುತ ಲೈನಿಂಗ್ ಕಾಮಗಾರಿ ನಡೆಯುತ್ತಿದೆ. 670 ಮೀ ನಷ್ಟು ಸುರಂಗ ಕೊರೆಯುವ ಕಾಮಗಾರಿ ಬಾಕಿಯಿದೆ. ಸುರಂಗ ಮಾರ್ಗದ 4.15 ಮೀ ನಷ್ಟು ಸಿ.ಸಿ ಲೈನಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಯೋಜನೆಯಲ್ಲಿ 13.35 ಕಿ.ಮೀ ಉದ್ದದ ಪೈಪ್ ಲೈನ್ ಇದ್ದು. ಇದರಲ್ಲಿ 5.5 ಕಿ.ಮೀ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

TAGGED:ಕಾವೇರಿ ನೀರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
8 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?