– ಇತ್ತ ಭಾರತಕ್ಕೆ ರಷ್ಯಾ ಬೆಂಬಲ
ಇಸ್ಲಾಮಾಬಾದ್/ಬೀಜಿಂಗ್: ಪಹಲ್ಗಾಮ್‌ನಲ್ಲಿ (Pahalgam) ಹಿಂದೂಗಳ ನರಮೇಧ ನಡೆದ ಬಳಿ ಭಾರತದ ಪ್ರತಿಕ್ರಮಕ್ಕೆ ಪಾಕಿಸ್ತಾನ ತತ್ತರಿಸಿದೆ. ಈ ನಡುವೆ ಚೀನಾ, ಪಾಕಿಸ್ತಾನಕ್ಕೆ ತನ್ನ ಬೆಂಬಲವನ್ನು ಮತ್ತೊಮ್ಮೆ ಖಚಿತಪಡಿಸಿದೆ. ಪಾಕಿಸ್ತಾನದಲ್ಲಿರುವ (Pakistan) ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್ (Jiang Zaidong), ಸಂಕಷ್ಟ ಸಮಯದಲ್ಲಿ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ (Asif Ali Zardari) ಅವರನ್ನು ಭೇಟಿಯಾದ ಜೈಡಾಂಗ್, ಭಾರತದೊಂದಿಗೆ ನಡೆಯುತ್ತಿರುವ ಪರಿಸ್ಥಿತಿಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಇದೇ ವೇಳೆ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆ ಖಚಿತಪಡಿಸಿಕೊಳ್ಳಲು ಚೀನಾ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತದೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್
ಭಾರತದ ಕ್ರಮಕ್ಕೆ ತತ್ತರಿಸಿದ ಪಾಕ್:
ಇದೇ ವೇಳೆ ಪಾಕ್‌ನಲ್ಲಿರುವ ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾರತ ತೆಗೆದುಕೊಂಡ ಇತ್ತೀಚಿನ ಕ್ರಮಗಳ ಬಗ್ಗೆ ಆಸಿಫ್ ಅಲಿ ಜರ್ದಾರಿ ಕಳವಳ ವ್ಯಕ್ತಪಡಿಸಿದರು. ಭಾರತದ ಕ್ರಮಗಳು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಅಪಾಯ ಉಂಟುಮಾಡಬಹುದು ಎಂದು ಆತಂಕಪಟ್ಟರು. ಇದನ್ನೂ ಓದಿ: ಯುದ್ಧ ಕಾರ್ಮೋಡ; ಭಾರತ ಸಮರಭ್ಯಾಸ – ಪಾಕ್‌ನಿಂದ ಫತಾಹ್ ಕ್ಷಿಪಣಿ ಪರೀಕ್ಷೆ
ಇದಕ್ಕೂ ಮೊದಲು, ಭಾರತವು ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ-ವಾಘಾ ಗಡಿಯನ್ನು ಮುಚ್ಚುವುದು ಮತ್ತು ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿತ್ತು. ಆಗಲೂ ಚೀನಾ ಪಾಕ್ ನಡೆಗೆ ಬೆಂಬಲ ವ್ಯಕ್ತಪಡಿಸಿತ್ತು. ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್
ಭಾರತಕ್ಕೆ ರಷ್ಯಾ ಬೆಂಬಲ:
ಪಾಕ್ ವಿರುದ್ಧ ತೆಗೆದುಕೊಳ್ಳುವ ಕ್ರಮಕ್ಕೆ ಭಾರತಕ್ಕೆ ಜಾಗತಿಕವಾಗಿ ಭಾರೀ ಬೆಂಬಲ ವ್ಯಕ್ತವಾಗ್ತಿದೆ. ಮಿತ್ರರಾಷ್ಟ್ರವಾಗಿರುವ ರಷ್ಯಾದಿಂದಲೂ ಉಗ್ರರ ವಿರುದ್ಧ ಭಾರತದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಬೆಂಬಲ ಸೂಚಿಸಿದ್ದಾರೆ. ಪಹ್ಲಗಾಮ್ ಉಗ್ರರ ದಾಳಿಯನ್ನು ಪುಟಿನ್ ಬಲವಾಗಿ ಖಂಡಿಸಿದ್ದಾರೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪುಟಿನ್ ಹೇಳಿದ್ದಾರೆಂದು ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.