Belagavi | 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರ ಸಾವು

Public TV
1 Min Read
Car Accident

– ಮಾಜಿ ಶಾಸಕ ಆರ್.ವಿ ಪಾಟೀಲ್ ಅವರ ಪುತ್ರನಿಗೂ ಗಾಯ

ಬೆಳಗಾವಿ: ಎರಡೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಬೈಲಹೊಂಗಲದಿಂದ ಹಿರೇಬಾಗೇವಾಡಿಗೆ ಬರ್ತಿದ್ದ ಆಲ್ಟೊ ಕಾರು ಹಾಗೂ ಬೆಳಗಾವಿಯಿಂದ ಬೈಲಹೊಂಗಲ ಮಾರ್ಗವಾಗಿ ಹೋಗುತ್ತಿದ್ದ ಕೀಯಾ ಕಾರು ನಡುವೆ ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

ಓವರ್ ಟೆಕ್ ಮಾಡಲು ಹೋಗಿ ಎದುರಿನಿಂದ ಬರ್ತಿದ್ದ ಆಲ್ಟೊ ಕಾರಿಗೆ ಕಿಯಾ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಆಲ್ಟೊ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲದೇ ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಅವರ ಪುತ್ರನಿಗೂ ಪೆಟ್ಟಾಗಿದ್ದು, ಕಿಯಾ ಕಾರಿನಲ್ಲಿದ್ದ ಇಬ್ಬರನ್ನೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 5 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಿದ್ದ ನಾಡಕಚೇರಿ ಕುಸಿತ – ದಾಖಲೆಗಳು ನಾಶ

ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರ ಶವಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್

Share This Article