ಶ್ರೀನಗರ: ಕಾಶ್ಮೀರದಲ್ಲಿ (Jammu Kashmir) ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು (Terrorists) ಬಂಧಿಸಲಾಗಿದೆ.
ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ನಮ್ಮ ಬೆಂಬಲವಿದೆ – ಚೀನಾ
ಬಂಧಿತರಿಂದ ಪಿಸ್ತೂಲ್, ಗ್ರೆನೇಡ್ ಮತ್ತು 15 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ.