ಹುಬ್ಬಳ್ಳಿ: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಭೀಕರವಾಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ಮೂಲದ ಶ್ವೇತ(29), ಅಂಜಲಿ(26), ಸಂದೀಪ್(26), ವಿಠಲ್(55) ಶಶಿಕಲಾ(40) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಮಳೆ ಮುನ್ಸೂಚನೆ
ಮೃತ ಐವರು ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ (Bagalkote) ತೆರಳುತ್ತಿದ್ದರು. ಈ ವೇಳೆ ಕುಸುಗಲ್ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸದ್ಯ ಸ್ಥಳಕ್ಕೆ ಹುಬ್ಬಳ್ಳಿ (Hubballi) ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್