ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಭಯೋತ್ಪಾದಕ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲೇ ಮಾಹಿತಿ ಇತ್ತು. ಹೀಗಾಗಿ, ಕಾಶ್ಮೀರಕ್ಕೆ ತಮ್ಮ ಭೇಟಿಯನ್ನು ಮೋದಿ ರದ್ದುಗೊಳಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.
ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಸಂವಿಧಾನ್ ಬಚಾವೋ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭಾವ್ಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ವರದಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಬಂದಿತ್ತು. ನಂತರ ಅವರು ಕೇಂದ್ರಾಡಳಿತ ಪ್ರದೇಶಕ್ಕೆ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿ ನಡೆಯುವ ಮೂರು ದಿನಗಳ ಮೊದಲು ಪ್ರಧಾನಿಗೆ ಗುಪ್ತಚರ ವರದಿಯನ್ನು ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಸಲಕ್ಕೆ ಪಾಕ್‌ಗೆ ಹರಿದ 28,000 ಕ್ಯುಸೆಕ್ ನೀರು – ಹಠಾತ್ ಪ್ರವಾಹ ಭೀತಿ
ಅವರಿಗೆ ಇದು ತಿಳಿದಿದ್ದರೆ, ಅವರು ಏಕೆ ಏನನ್ನೂ ಮಾಡಲಿಲ್ಲ? ದಾಳಿಗೆ ಮೂರು ದಿನಗಳ ಮೊದಲು ಪ್ರಧಾನಿ ಮೋದಿಗೆ ಗುಪ್ತಚರ ವರದಿಯನ್ನು ಕಳುಹಿಸಲಾಗಿತ್ತು. ಆದ್ದರಿಂದ ಅವರು ಕಾಶ್ಮೀರಕ್ಕೆ ಭೇಟಿ ನೀಡುವ ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿದರು. ನಾನು ಇದನ್ನು ಪತ್ರಿಕೆಯಲ್ಲಿ ಓದಿದ್ದೇನೆ ಎಂದು ಖರ್ಗೆ ಟೀಕಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ರಜೆಯನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಬಲಿ ತೆಗೆದುಕೊಂಡ ದಾಳಿಯಲ್ಲಿ ಗುಪ್ತಚರ ವೈಫಲ್ಯವಿತ್ತು ಎಂದು ಸರ್ಕಾರವೇ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ