ಮಂಗಳೂರು: ಪಾಕಿಸ್ತಾನದ (Pakistan) ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದ ಹಿನ್ನೆಲೆ, ಕೆಲ ವಾಯು ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಇದರಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಮಂಗಳೂರು ವಿಮಾನ ನಿಲ್ದಾಣದ (Mangaluru Airport) ಆಡಳಿತ ವಿಭಾಗ ಮಾಹಿತಿ ನೀಡಿದೆ
In view of airspace restrictions and closure of certain airports across the country, flight operations may be impacted. We urge passengers to check with their airlines for the latest flight status before travelling to the airport.
We appreciate your cooperation and… pic.twitter.com/CdcHJkmwSk
— Mangaluru Airport (@mlrairport) May 7, 2025
ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇರುವುದರಿಂದ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನವೇ ಪ್ರಯಾಣಿಕರು ವಿಮಾನವನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಏರ್‍ಲೈನ್‍ಗಳೊಂದಿಗೆ ಪರಿಶೀಲಿಸಿ ಮಾಹಿತಿ ಪಡೆದುಕೊಳ್ಳುವಂತೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.
ಭಾರತವು ಪಾಕಿಸ್ತಾನದ (Pakistan) ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ(Indigo) 165ಕ್ಕೂ ಹೆಚ್ಚು ವಿಮಾನಯಾನವನ್ನು ಸ್ಥಗಿತಗೊಳಿಸಿದೆ. ಜಮ್ಮು, ಶ್ರೀನಗರ, ಅಮೃತಸರ, ಲೇಹ್, ಚಂಡೀಗಢ, ಜೋಧ್‌ಪುರ, ಧರ್ಮಶಾಲಾ, ಬಿಕಾನೇರ್, ಗ್ವಾಲಿಯರ್, ಕಿಶನ್‌ಗಢ ಮತ್ತು ರಾಜ್‌ಕೋಟ್‌ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 10ರವರೆಗೆ ಇಂಡಿಗೋ ರದ್ದುಗೊಳಿಸಿದೆ.
ಪರಿಸ್ಥಿತಿ ಸೂಕ್ಷ್ಮತೆಯನ್ನು ಗಮನಿಸಿ ಇತರ ನಿಲ್ದಾಣಗಳಿಗೆ ವಿಮಾನ ಹಾರಾಟವನ್ನು ಹೊಂದಾಣಿಕೆ ಮಾಡಲಾಗುವುದು. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಪ್ರಯಾಣಿಕರು ತಮ್ಮ ಪ್ರಯಾಣದ ಸ್ಥಿತಿಯನ್ನು ಪರಿಶೀಲಿಸುವಂತೆ ಗ್ರಾಹಕರಿಗೆ ಇಂಡಿಗೋ ಸಲಹೆ ನೀಡಿದೆ. ಅಲ್ಲದೇ ಏರ್ ಇಂಡಿಯಾ(Air India) ಸಂಸ್ಥೆ ಕೂಡ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್ ನಿಲ್ದಾಣಗಳಿಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟಗಳನ್ನು ಮೇ 10ರ ವರೆಗೆ ಬಂದ್ ಮಾಡಿದೆ ಎಂದು ಎಕ್ಸ್ ಮೂಲಕ ತಿಳಿಸಿದೆ.