ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ತಂಗ್ಧರ್‌ನಲ್ಲಿ ಪಾಕಿಸ್ತಾನ (Pakistan) ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ 15 ನಾಗರಿಕರು ಸಾವನ್ನಪ್ಪಿದ್ದು, 43 ಜನ ಗಾಯಗೊಂಡಿದ್ದಾರೆ.
15 civilians killed, 43 injured in artillery firing by Pakistan Army in Poonch, Tangdhar
Read @ANI Story | https://t.co/8ElNRNY03o#poonchattack #PakistanArmy pic.twitter.com/UEcH8qs223
— ANI Digital (@ani_digital) May 7, 2025
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ (POK) ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯನ್ನು ನಡೆಸಿದೆ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ (Operation Sindoor) ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್‌ಸ್ಟ್ರೈಕ್ ನಡೆಸಿತು.
ಈ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಶೆಲ್ ದಾಳಿ ನಡೆಸಿ 15 ನಾಗರಿಕರನ್ನು ಬಲಿ ತೆಗೆದುಕೊಂಡಿದೆ.