ಆಪರೇಷನ್ ಸಿಂಧೂರ – ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ ಸಾವು

Public TV
2 Min Read
Kandahar Flight Hijack Mastermind Abdul Rauf Azhar Died In Operation Sindoor

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್‌ನ ಸಹೋದರ, ಕಂದಹಾರ್ ವಿಮಾನ ಹೈಜಾಕ್‌ನ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ (Abdul Rauf Azhar) ಸಾವನ್ನಪ್ಪಿರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ಧೃಢಪಡಿಸಿದೆ.

ಬಹವಾಲ್ಪುರದಲ್ಲಿ ನಡೆಸಿದ ಏರ್‌ಸ್ಟ್ರೈಕ್ ವೇಳೆ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್‌ನ ಕುಟುಂಬದ 13 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಅಜರ್ ಮಸೂದ್ ಸಹೋದರ ಅಬ್ದುಲ್ ರೌಫ್ ಕೂಡ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಬಿಬಿಎಂಪಿ ಕಾರ್ಮಿಕರಿಗೆ ಬಿಎಂಟಿಸಿ ಬಸ್ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

Operation Sindoor

ಅಬ್ದುಲ್ ರೌಫ್ ಅಜರ್ ಕಂದಹಾರ್ ವಿಮಾನ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ವಾಮಾ, ಪಠಾಣ್‌ಕೋಟ್ ಭಯೋತ್ಪಾದಕ ದಾಳಿ, 2001ರ ಸಂಸತ್ ದಾಳಿ, ಅಕ್ಷರಧಾಮ ದಾಳಿಯಲ್ಲೂ ಭಾಗಿಯಾಗಿದ್ದ. ಅಜರ್, ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಬೇಕಾದ ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್‌ನಲ್ಲಿ ಇವನೂ ಕೂಡ ಒಬ್ಬ. ಇದನ್ನೂ ಓದಿ: ಪಾಕಿಸ್ತಾನದ HQ-9 ವಾಯು ರಕ್ಷಣಾ ಕ್ಷಿಪಣಿ ಉಡಾವಣಾ ಕೇಂದ್ರಗಳೇ ಉಡೀಸ್‌

1999ರ IC-814 ವಿಮಾನ ಅಪಹರಣ:
ರೌಫ್ ಅಜರ್ ಇಂಡಿಯನ್ ಏರ್ಲೈನ್ಸ್ ವಿಮಾನ ಐಸಿ-814 ಅಪಹರಣದ (IC-814 Hijacking) ಪ್ರಮುಖ ಮಾಸ್ಟರ್‌ಮೈಂಡ್. ಡಿಸೆಂಬರ್ 24, 1999 ರಂದು ಇಂಡಿಯನ್ ಏರ್‌ಲೈನ್ಸ್‌  ವಿಮಾನ ಐಸಿ814, ನೇಪಾಳದ ಕಠ್ಮಂಡುವಿನಿಂದ ದೆಹಲಿಗೆ ಆಗಮಿಸುತ್ತಿತ್ತು. 176 ಪ್ರಯಾಣಿಕರಿದ್ದ ಈ ವಿಮಾನವನ್ನು ಪಾಕ್ ಉಗ್ರಗಾಮಿ ಸಂಘಟನೆ ಹರ್ಕತ್-ಉಲ್-ಮುಜಾಹಿದ್ದೀನ್ ಉಗ್ರರು ಅಪಹರಣ ಮಾಡಿದ್ದರು. ಇದನ್ನೂ ಓದಿ: ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು – ಖರ್ಗೆ ಅಸಮಾಧಾನ

ದೆಹಲಿಗೆ ಆಗಮಿಸಬೇಕಾಗಿದ್ದ ವಿಮಾನವನ್ನು ಉಗ್ರರು ಅಫ್ಘಾನಿಸ್ತಾನ ಕಂದಹಾರ್ ಗೆ ತೆಗೆದುಕೊಂಡು ಹೋಗಿದ್ದರು. ಈ ವೇಳೆ ವಿಮಾನ ಪ್ರಯಾಣಿಕರು ಹಾಗೂ ಸಿಬ್ಬಂದಿಗಳನ್ನು ಉಗ್ರರು ತಮ್ಮ ಬಿಗಿ ಹಿಡಿತದಲ್ಲಿರಿಸಿಕೊಂಡಿದ್ದರು. ಇದನ್ನೂ ಓದಿ: ಆಪರೇಷನ್ ಸಿಂಧೂರ | ಬೆಂಗ್ಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಪೊಲೀಸರ ಹದ್ದಿನ ಕಣ್ಣು

ಉಗ್ರ ಮೌಲಾನಾ ಮಸೂದ್ ಅಝರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಬಿಡುಗಡೆ ಮಾಡಬೇಕೆಂದು ವಿಮಾನ ಅಪಹರಿಸಿದ್ದ ಉಗ್ರರು ಬೇಡಿಕೆ ಇಟ್ಟಿದ್ದರು. ಏಳು ದಿನಗಳ ಕಾಲ ಉಗ್ರರ ಒತ್ತೆಯಾಳಾಗಿದ್ದ ವಿಮಾನ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ವಾಜಪೇಯಿ ಸರ್ಕಾರ ಜೀವಂತವಾಗಿ ಕರೆತರಲು ಭಾರತದಲ್ಲಿ ಜೈಲಿನಲ್ಲಿದ್ದ ಮೂವರು ಕುಖ್ಯಾತ ಭಯೋತ್ಪಾದಕರನ್ನು ಬಿಡುಗಡೆ ಮಾಡಿತ್ತು. ಇದನ್ನೂ ಓದಿ: ಅಮೃತಸರದತ್ತ ಹಾರಿದ ಪಾಕ್‌ ಕ್ಷಿಪಣಿ ಅರ್ಧದಲ್ಲೇ ಉಡೀಸ್‌

Share This Article