ಇಸ್ಲಾಮಾಬಾದ್/ಶ್ರೀನಗರ: ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ ತಕ್ಕ ಶಾಸ್ತಿ ಮಾಡಿಸಿಕೊಂಡಿದೆ. ಭಾರತದ ಕ್ಷಿಪಣಿಗಳ ದಾಳಿಗೆ ಲಾಹೋರ್‌ನ ರೆಡಾರ್ ಕೇಂದ್ರವೇ (Lahore Radar Systems) ಧ್ವಂಸವಾಗಿದೆ. ಈ ಬೆನ್ನಲ್ಲೇ ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರ ಕಚೇರಿಯು (US Embassy) ಪಾಕ್‌ನಲ್ಲಿರುವ ಯುಎಸ್ ಪ್ರಜೆಗಳು ಕೂಡಲೇ ದೇಶ ತೊರೆಯುವಂತೆ ಹೇಳಿದೆ.
ಭಾರತೀಯ ನಗರಗಳನ್ನ (Indian Cities) ಟಾರ್ಗೆಟ್ ಮಾಡಿದ್ದ ಪಾಕ್‌ಗೆ ದಿಟ್ಟ ಉತ್ತರ ನೀಡಿದ ಭಾರತೀಯ ವಾಯುಸೇನೆ, ಲಾಹೋರ್‌ನಲ್ಲಿರುವ ರೆಡಾರ್ ಕೇಂದ್ರವನ್ನೇ ಧ್ವಂಸ ಮಾಡಿದೆ. ಶೇಖ್‌ಪುರ, ಸಿಯಾಲ್ ಕೋಟ್, ಗುಜರನ್ ವಾಲಾ ಮತ್ತು ನರೊವಾಲಾ ಮತ್ತ ಚಕ್ವಾಲ್ ಮೇಲೂ ಭಾರತದ ಕಾಮಕಾಜಿ ಡ್ರೋನ್ ದಾಳಿ ನಡೆಸಿದೆ. ಒಟ್ಟು 25 ಕ್ಷಿಪಣಿಗಳನ್ನು ಭಾರತ ಹಾರಿಸಿದೆ ಇದರಲ್ಲಿ 7 ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯನ್ನು ಗುರಿಯಾಗಿಸಿವೆ. ಇದನ್ನೂ ಓದಿ: ಪಾಕಿಸ್ತಾನದ HQ-9 ವಾಯು ರಕ್ಷಣಾ ಕ್ಷಿಪಣಿ ಉಡಾವಣಾ ಕೇಂದ್ರಗಳೇ ಉಡೀಸ್
ಲಾಹೋರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತ ಅಮೆರಿಕ ರಾಯಭಾರ ಕಚೇರಿ ತನ್ನೆಲ್ಲಾ ಸಿಬ್ಬಂದಿಗೆ ಆಶ್ರಯ ನೀಡುವಂತೆ ಕೇಳಿದೆ. ಅಲ್ಲದೇ ಸಂಘರ್ಷ ಪೀಡಿತ ಪ್ರದೇಶಗಳಲ್ಲಿರುವ ಅಮೆರಿಕದ ನಾಗರಿಕರು ಕೂಡಲೇ ದೇಶ ತೊರೆಯುವಂತೆ ಸೂಚನೆ ನೀಡಿದೆ. ಎಲ್ಲ ಯುಎಸ್ ನಾಗರಿಕರು ಸಾಧ್ಯವಾದ್ರೆ ಈ ಕೂಡಲೇ ಹೊರಡಿ ಅಥವಾ ಪಾಕ್‌ನ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆದುಕೊಳ್ಳಿ ಎಂದು ಎಚ್ಚರಿಸಿದೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರʼದಲ್ಲಿ 100 ಉಗ್ರರ ಹತ್ಯೆ – ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ