ನವದೆಹಲಿ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ (Samba) ಭಾರತದ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
At around 2300 hours on 8 May 2025, BSF foiled a major infiltration bid at the International Boundary in Samba district, J&K. @BSF_India @PMOIndia @HMOIndia @PIBHomeAffairs @PIB_India @BSF_SDG_WC @mygovindia
— BSF JAMMU (@bsf_jammu) May 8, 2025
ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ (BSF) ವಿಫಲಗೊಳಿಸಿದೆ. ಇದನ್ನೂ ಓದಿ: ಜಮ್ಮುವಿನಲ್ಲಿ ಅಮಾಯಕರನ್ನ ಟಾರ್ಗೆಟ್ ಮಾಡಿದ ʻಪಾಪಿಸ್ತಾನʼ – 10,000 ಮಂದಿ ಸ್ಥಳಾಂತರ?
ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್‌ಎಫ್ ಯೋಧರು ಗುಂಡಿಕ್ಕಿ ಕೊಂದಿದ್ದಾರೆ ಈ ಮಾಹಿತಿಯನ್ನು ಬಿಎಸ್‌ಎಫ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: Video | ಪ್ರತೀಕಾರ ಸಮರ – ರಾತ್ರಿಯಿಡೀ ವಾರ್‌ರೂಂನಲ್ಲಿದ್ದು ಕ್ಷಣಕ್ಷಣದ ಮಾಹಿತಿ ಪಡೆದ ಮೋದಿ
ಜಮ್ಮು, ರಾಜಸ್ಥಾನ ಮತ್ತು ಪಂಜಾಬ್‌ನ ಅಮೃತಸರ ಸೇರಿ ಭಾರತದ 15 ನಗರಗಳನ್ನು ಗುರಿಯಾಗಿಸಿ ಪಾಕಿಸ್ತಾನ ಮಿಸೈಲ್, ಡ್ರೋನ್ ದಾಳಿ ನಡೆಸಿತು. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್‌ನ ಎಲ್ಲಾ ಮಿಸೈಲ್‌ಗಳನ್ನು ಹೊಡೆದುರುಳಿಸಿದೆ. ಇದನ್ನೂ ಓದಿ: ಭಾರತ-ಪಾಕ್ ನಡುವೆ ಯುದ್ಧ ಛಾಯೆ – ರದ್ದಾಗುತ್ತಾ ಐಪಿಎಲ್?- ಅತ್ತ ಪಾಕ್ ಸೂಪರ್ ಲೀಗ್ ದುಬೈಗೆ ಶಿಫ್ಟ್