‘ಸೀತಾ ವಲ್ಲಭ’ ಸೀರಿಯಲ್ ನಟಿ ಸುಪ್ರೀತಾ ಸತ್ಯನಾರಾಯಣ್ (Supritha Sathyanarayan) ಇಂದು (ಮೇ 9) ಬಹುಕಾಲದ ಗೆಳೆಯ ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ:‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಬೇಡಿಕೆ- ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು
ಇಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಚಂದನ್ ಶೆಟ್ಟಿ ಜೊತೆ ಸುಪ್ರೀತಾ ಮದುವೆಯಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಚಂದನ್ ಅವರನ್ನು ನಟಿ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆ ಪಡೆದು ಚಂದನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ ಸುಪ್ರೀತಾ. ಇವರ ಮದುವೆಗೆ ನೇಹಾ ಗೌಡ, ರಶ್ಮಿಕಾ ಪ್ರಭಾಕರ್, ಸುಜಾತಾ ಅಕ್ಷಯ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.
ಇತ್ತೀಚೆಗಷ್ಟೇ ಚಂದನ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಶುಭ ಸುದ್ದಿ ನೀಡಿದ್ದರು. ಮಾರ್ಚ್ 12ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ
ಡಿಜಿಟಲ್ ಕ್ರಿಯೇಟರ್, ಸಾಫ್ಟ್‌ವೇರ್ ಉದ್ಯೋಗಿ ಚಂದನ್ ಶೆಟ್ಟಿ ಅವರನ್ನು ನಟಿ ಮದುವೆಯಾಗಿದ್ದಾರೆ. ಕೊಡಗು ಮೂಲದ ಚಂದನ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.