ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್

Public TV
1 Min Read
salman khan

ಭಾರತ-ಪಾಕ್ ನಡುವಿನ ‘ಕದನ ವಿರಾಮಕ್ಕೆ ಧನ್ಯವಾದಗಳು ದೇವರೇ’ ಎಂದು ಸಲ್ಮಾನ್ ಖಾನ್ (Salman Khan) ಪೋಸ್ಟ್ ಹಂಚಿಕೊಂಡು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ:ʻರಾಕಿ ಭಾಯ್‌ʼ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; KGF-3 ಬಗ್ಗೆ ಬಿಗ್‌ ಹಿಂಟ್‌ ಕೊಟ್ಟ ಹೊಂಬಾಳೆ ಫಿಲ್ಮ್ಸ್

Bollywood Salman Khanಮೇ 10 ಸಂಜೆ ಭಾರತ ಮತ್ತು ಪಾಕ್ ನಡುವೆ ಕದನ ವಿರಾಮ ಒಪ್ಪಂದ ಆಯಿತು. ಆಗ ಸಲ್ಮಾನ್ ಖಾನ್, ‘ಕದನ ವಿರಾಮ ಏರ್ಪಟ್ಟಿದ್ದಕ್ಕೆ ಧನ್ಯವಾದಗಳು’ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಅವರ ಈ ನಡೆಗೆ ಅನೇಕರಿಂದ ವ್ಯಾಪಕ ಟೀಕೆ ವ್ಯಕ್ತವಾಯಿತು. ಕೂಡಲೇ ನಟ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಹೀಗಾಗಿ ನಟನನ್ನು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಮಾಡ್ತಿದ್ದಾರೆ. ಇದನ್ನೂ ಓದಿ:ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ

salman khan

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ (Operation Sindoor) ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಿದ್ದಕ್ಕೆ ಚಿತ್ರರಂಗದ ಕಲಾವಿದರು ಮೆಚ್ಚುಗೆ ಸೂಚಿಸಿದ್ದರು. ಆದರೆ, ಸಲ್ಮಾನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಕದನ ವಿರಾಮ ಘೋಷಣೆ ಆಗ್ತಿದ್ದಂತೆ ರಿಯಾಕ್ಟ್ ಮಾಡಿದ್ದಕ್ಕೆ ನಟನ ವಿರುದ್ಧ ನೆಟ್ಟಿಗರು ಕೆಂಡಕಾರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಜಾಡಿಸಿದ್ದಾರೆ.

ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಪ್ರವಾಸಿಗರು ಬಲಿಯಾಗಿದ್ದರು. ಈ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಪಾಕ್‌ಗೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ.

Share This Article