ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಉಗ್ರರ ನೆಲೆಗಳ ವಿರುದ್ಧ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ಐವರು ಯೋಧರು (Soldiers) ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ (Indian Army) ಅಧಿಕೃತವಾಗಿ ಮಾಹಿತಿ ನೀಡಿದೆ.
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಕುರಿತು ಭಾನುವಾರ ಸಂಜೆ ಹಿರಿಯ ಮಿಲಿಟರಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ದೇಶಕ್ಕಾಗಿ ಸೇವೆ ಸಲ್ಲಿಸಿ ಹುತಾತ್ಮರಾದ ಯೋಧರಿಗೆ ಭಾರತೀಯ ಸೇನಾಪಡೆ ಗೌರವ ಸಲ್ಲಿಸುತ್ತದೆ. ಅಲ್ಲದೇ ಅವರ ತ್ಯಾಗಗಳನ್ನು ಯಾವಾಗಲೂ ಸ್ಮರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಸಿಲುಕಿರುವ 13 ಕರ್ನಾಟಕದ ವಿದ್ಯಾರ್ಥಿಗಳು – ವಾಪಸ್ ಕರೆತರಲು ನೆರವಾದ ಹೆಚ್‌ಡಿಕೆ
ಮೇ 7ರಿಂದ ಮೇ 10 ರವರೆಗೆ ಜಮ್ಮು ಕಾಶ್ಮೀರ ಗಡಿಯಲ್ಲಿ (LOC) ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸುಮಾರು 35ರಿಂದ 40 ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ದಾಳಿ ನಡೆಸಿದ ಕುರಿತು ವೀಡಿಯೋ ಸಾಕ್ಷ್ಯ ಸಮೇತ ಇಂಚಿಂಚು ಮಾಹಿತಿ ನೀಡಿದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಮತ್ತೆ ಪಾಕ್ ದಾಳಿ ನಡೆಸಿದರೆ ತೀವ್ರವಾಗಿ ದಾಳಿ ನಡೆಸುವ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ