ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

Public TV
2 Min Read
Pakistan Terrorist Funeral

– ಮುಗ್ಧ ವ್ಯಕ್ತಿ, ಧರ್ಮ ಪ್ರಚಾರಕ ಅಂತ ಬಣ್ಣಿಸಿದ ಪಾಕ್ ಸೇನೆ

ಇಸ್ಲಾಮಾಬಾದ್: ಲಷ್ಕರ್-ಇ-ತೈಬಾ (Lashkar-e-Taiba) ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪಾಕ್ ಸೇನೆ ಆತ ಒಬ್ಬ ಮುಗ್ಧ ವ್ಯಕ್ತಿ ಹಾಗೂ ಧರ್ಮ ಪ್ರಚಾರಕ ಎಂದು ಸಮರ್ಥನೆ ಮಾಡಿಕೊಂಡಿದೆ.

ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ ಉಗ್ರ ಸಾವನ್ನಪ್ಪಿದ್ದ. ಆತನ ಅಂತ್ಯಕ್ರಿಯೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಭಯೋತ್ಪಾದಕ ಮಸೂದ್ ಅಜರ್‌ನ ಸಹೋದರ ಅಬ್ದುಲ್ ರೌಫ್ ಅಜರ್ ಹಾಗೂ ಪಾಕಿಸ್ತಾನ ಅಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿ, ವಿವಾದ ಉಂಟಾಗಿತ್ತು.ಇದನ್ನೂ ಓದಿ: ಭಾರತ-ಪಾಕ್ ʻಕದನ-ವಿರಾಮʼ ಮಾತುಕತೆ – ಇಂದು ಎರಡೂ ದೇಶಗಳ ಡಿಜಿಎಂಒಗಳ ಸಭೆ

ಫೋಟೋ ವೈರಲ್ ಆದ ಬೆನ್ನಲ್ಲೇ ವಿವಾದ ಕಡಿಮೆ ಮಾಡುವ ಉದ್ದೇಶದಿಂದ ಪತ್ರಿಕಾಗೋಷ್ಠಿ ನಡೆಸಿದ್ದು, ಪಾಕಿಸ್ತಾನದ ಮಿಲಿಟರಿ ವಕ್ತಾರ ಡಿಜಿ ಐಎಸ್‌ಪಿಆರ್ ಮಾತನಾಡಿ, ಆತ ಒಬ್ಬ ಸರಳ, ಮುಗ್ಧ ಕುಟುಂಬದ ವ್ಯಕ್ತಿ, ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಅದನ್ನು ಸಾಬೀತುಪಡಿಸಲು ಪಾಕಿಸ್ತಾನ ರಾಷ್ಟ್ರೀಯ ಗುರುತಿನ ಚೀಟಿಯನ್ನು ಕೂಡ ಪ್ರದರ್ಶಿಸಿದ್ದಾರೆ.

ಆದರೆ ಭಾರತೀಯ ಅಧಿಕಾರಿಗಳ ಮಾಹಿತಿ ಪ್ರಕಾರ, ಅಧಿಕೃತ ದಾಖಲೆಗಳು ಸಂಪೂರ್ಣವಾಗಿ ವಿಭಿನ್ನ ಕಥೆಯನ್ನು ಹೇಳುತ್ತವೆ. `ಆಪರೇಷನ್ ಸಿಂಧೂರ’ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಭಾರತ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದ ಭಯೋತ್ಪಾದಕನ ಅಂತ್ಯಕ್ರಿಯೆ ವೇಳೆ ಅಮೆರಿಕದಿಂದ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ಮತ್ತು ಹಿರಿಯ ಎಲ್‌ಇಟಿ ಕಮಾಂಡರ್ ಹಫೀಜ್ ಅಬ್ದುಲ್ ರೌಫ್ ಭಾಗಿಯಾಗಿರುವ ಫೋಟೋವನ್ನು ಬಹಿರಂಗಪಡಿಸಿದರು.

ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಸರ್ಕಾರಿ ಅಂತ್ಯಕ್ರಿಯೆ ನೀಡುವುದು ಒಂದು ಪದ್ಧತಿಯಾಗಿರಬಹುದು. ಆದರೆ ಈ ಫೋಟೋ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ನಿರಂತರವಾಗಿ ಪೋತ್ಸಾಹ ನೀಡುತ್ತಿದೆ ಎಂದು ಹೈಲೆಟ್ ಮಾಡಿದರು. ಜೊತೆಗೆ ಅಂತ್ಯಕ್ರಿಯೆಯಲ್ಲಿ ಹಾಜರಿದ್ದ ಪಾಕಿಸ್ತಾನದ ಉನ್ನತ ಅಧಿಕಾರಿಗಳ ಹೆಸರುಗಳನ್ನು ಬಿಡುಗಡೆ ಮಾಡಿದ್ದಾರೆ.ಇದನ್ನೂ ಓದಿ: ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

Share This Article