ಚಂಡೀಗಢ: ಕಳ್ಳಭಟ್ಟಿ (Spurious Liquor) ಸೇವಿಸಿ ಐದು ಗ್ರಾಮದ 14 ಮಂದಿ ಸಾವನ್ನಪ್ಪಿದ್ದು, 6 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ (Punjab) ಅಮೃತಸರದಲ್ಲಿ (Amritsar) ನಡೆದಿದೆ.
ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳಲ್ಲಿನ 14 ಮಂದಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟಿದ್ದಾರೆ. ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ 14 ಮಂದಿ ಸಾವಿನ ಕುರಿತು ದೃಢಪಡಿಸಿದರು. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರ’ ಸಂಭ್ರಮ: 17 ಶಿಶುಗಳಿಗೆ ‘ಸಿಂಧೂರ’ ನಾಮಕರಣ
ಘಟನೆಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಭಜಿತ್ ಸಿಂಗ್, ಕುಲ್ಬೀರ್ ಸಿಂಗ್, ಸಾಹಿಬ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತಾ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Photo Gallery: ‘ಆಪರೇಷನ್ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ