ಬೆಂಗಳೂರು: ರಾಜ್ಯದ 17 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಯಲ್ಲೋ ಅಲರ್ಟ್ (Yellow Alert) ಜಾರಿ ಮಾಡಿದ್ದು ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ.
ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ,ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.