ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮದ ಬಳಿಕ ಮೇ 17ರಿಂದ ಐಪಿಎಲ್‌ನ (IPL 2025) ಕೊನೆಯ ಹಂತದ ಪಂದ್ಯಗಳು ಮತ್ತೆ ಆರಂಭಗೊಳ್ಳಲಿದೆ. ಈ ಹಿನ್ನೆಲೆ ಬೆಂಗಳೂರಿನ ಪಂದ್ಯಗಳ ಸಂದರ್ಭದಲ್ಲಿ ಸಾರ್ವಜನಿಕರ ಅನೂಕೂಲಕ್ಕಾಗಿ ನಮ್ಮ ಮೆಟ್ರೋ (Namma Metro) ಪಂದ್ಯಗಳ ದಿನ ಸಮಯಾವಧಿ ವಿಸ್ತರಣೆ ಮಾಡಿದೆ.
ಮೇ 17 ಮತ್ತು ಮೇ 23ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಈ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ಟರ್ಮಿನಲ್ ಅಂದರೆ ವೈಟ್ ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ಮಧ್ಯರಾತ್ರಿ 1ರ ವರೆಗೆ ವಿಸ್ತರಿಸಿದೆ. ಇದನ್ನೂ ಓದಿ: ನಕ್ಸಲರ ವಿರುದ್ಧ ಕಾರ್ಯಾಚರಣೆ ವೇಳೆ ಜೇನು ದಾಳಿ – ಬೆಂಗ್ಳೂರಲ್ಲಿ ಪಳಗಿದ್ದ ಸ್ನಿಫರ್ ಡಾಗ್ ಸಾವು
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1:35ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ನಮ್ಮ ಮೆಟ್ರೋ ಕೋರಿದೆ. ಮೇ 17ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಕೋಲ್ಕತ್ತಾ ಮುಖಾಮುಖಿಯಾಗಲಿದೆ. ಇದನ್ನೂ ಓದಿ: ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್ ಸರಿಯಾದ ನಿಲುವು ಪ್ರಕಟಿಸಲಿ: ಆರ್.ಅಶೋಕ್