ರಾಯಚೂರು: ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ರಾಯಚೂರು (Raichuru) ಗ್ರಾಮೀಣ ಪೊಲೀಸರು ಅರೆಸ್ಟ್ ಮಾಡಿದ್ದು, ಚಿನ್ನಾಭರಣ ಸೇರಿ 7.89 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ರಾಯಚೂರಿನ ಎಲ್‌ಬಿಎಸ್ ನಗರದ ವಿರೇಶ್ ಎಂದು ಗುರುತಿಸಲಾಗಿದ್ದು, ಜಿಲ್ಲೆಯ ವಿವಿಧೆಡೆ ಮನೆಗಳ್ಳತನ ಮಾಡಿದ್ದ.ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಓರ್ವನಿಗೆ ಗಂಭೀರ ಗಾಯ
ಆರೋಪಿ ವಿರೇಶ್ ವಿರುದ್ಧ ರಾಯಚೂರಿನ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಬಂಧಿತನಿಂದ 76 ಗ್ರಾಂ ಚಿನ್ನಾಭರಣ ಹಾಗೂ 382 ಗ್ರಾಂ ಬೆಳ್ಳಿ ಆಭರಣ, ಕೈಗಡಿಯಾರಗಳು, ಕ್ಯಾಮರಾ ಸೇರಿ ಸುಮಾರು 7.89 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ರಾಯಚೂರು ಗ್ರಾಮೀಣ, ಮಾನ್ವಿ ಮತ್ತು ಸಿಂಧನೂರು ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದು, ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ ಎಸ್.ಪಿ.ಪುಟ್ಟಮಾದಯ್ಯ ಬಹುಮಾನ ನೀಡಿ ಸನ್ಮಾನಿಸಿದ್ದಾರೆ.ಇದನ್ನೂ ಓದಿ: ಆಪರೇಷನ್ ಸಿಂಧೂರ ಸಮಾಧಾನ ತಂದಿಲ್ಲ ಅಂದಿದ್ದು, ಸೇನೆ ಬಗ್ಗೆ ಹಗುರವಾಗಿ ಮಾತಾಡಿಲ್ಲ: ಮಂಜುನಾಥ್ ಸ್ಪಷ್ಟನೆ