ಮುಂಬೈ: ಇಂಗ್ಲೆಂಡ್ (England) ಪ್ರವಾಸಕ್ಕೆ ( BCCI) ಬಿಸಿಸಿಐ, 18 ಆಟಗಾರ ಬಲಿಷ್ಠ ಟೀಂ ಇಂಡಿಯಾ ಎ ತಂಡವನ್ನು (India A’s squad) ಆಯ್ಕೆ ಮಾಡಿದೆ. ಅನುಭವಿ ಬ್ಯಾಟ್ಸ್‌ಮನ್ ಅಭಿಮನ್ಯು ಈಶ್ವರನ್ (Abhimanyu Easwaran) ತಂಡದ ನಾಯಕತ್ವ ವಹಿಸಲಿದ್ದಾರೆ.
ಈ ಬಲಿಷ್ಠ ತಂಡದಲ್ಲಿ ಕನ್ನಡಿಗ ಕರುಣ್ ನಾಯರ್ ಮತ್ತು ವಿಕೆಟ್ ಕೀಪರ್ ಇಶಾನ್ ಕಿಶನ್ ತಂಡಕ್ಕೆ ಇದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ತಂಡದಲ್ಲಿದ್ದಾರೆ. ತಂಡವು ಕ್ಯಾಂಟರ್ಬರಿ ಮತ್ತು ನಾರ್ಥಾಂಪ್ಟನ್‌ನಲ್ಲಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ಎರಡು ಪಂದ್ಯಗಳನ್ನು ಆಡಲಿದೆ.
ಇದಕ್ಕೂ ಮೊದಲು, ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ಎ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಿದ್ದರು.
ಟೀಂ ಇಂಡಿಯಾ ಎ ತಂಡ: ಅಭಿಮನ್ಯು ಈಶ್ವರನ್ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ಶಾರ್ದುಲ್ ಠಾಕೂರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಮಾನವ್ ಸುತಾರ್, ತನುಷ್ ಕೋಟ್ಯಾನ್, ಮುಖೇಶ್ ಕುಮಾರ್, ಆಕಾಶ್ ದೀಪ್, ಹರ್ಷಿತ್ ರಾಣಾ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್, ರುತುರಾಜ್ ಗಾಯಕ್ವಾಡ್, ಸರ್ಫರಾಜ್ ಖಾನ್, ತುಷಾರ್ ದೇಶಪಾಂಡೆ, ಹರ್ಷ್ ದುಬೆ ತಂಡದಲ್ಲಿದ್ದಾರೆ.
ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಎರಡನೇ ಪಂದ್ಯಕ್ಕೂ ಮೊದಲು ತಂಡವನ್ನು ಸೇರಲಿದ್ದಾರೆ.