ಸಿಗರೇಟ್ ವಿಚಾರಕ್ಕೆ ಕಿರಿಕ್ – ಬೆಂಗಳೂರಲ್ಲಿ ಕಾರು ಗುದ್ದಿಸಿ ಟೆಕ್ಕಿ ಕೊಲೆ

Public TV
1 Min Read
techie murder

– ಕಾರಲ್ಲೇ ಕೂತ ಸಿಗರೇಟ್ ತಂದುಕೊಡು ಎಂದಿದ್ದ ಆರೋಪಿ; ಆಗಲ್ಲ ಎಂದಿದ್ದಕ್ಕೆ ಹತ್ಯೆ

ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಕಿರಿಕ್ ತೆಗೆದು ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಇದು ಅಪಘಾತ ಎಂದು ತಿಳಿದಿದ್ದ ಪೊಲೀಸರು, ಅಸರಿ ವಿಚಾರ ಗೊತ್ತಾಗಿ ಶಾಕ್ ಆಗಿದ್ದಾರೆ.

ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಪ್ರತೀಕ್ ಎಂಬಾತನಿಂದ ಕಾರು ಗುದ್ದಿಸಿ ಕೊಲೆಯಾಗಿದೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿಎಂ ಮಂಗಳೂರು ಪ್ರವಾಸದಲ್ಲಿದ್ದಾಗಲೇ ಅಹಿತಕರ ಘಟನೆ – ಬಂಟ್ವಾಳದಲ್ಲಿ ವ್ಯಕ್ತಿ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌

ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್‌ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು.

ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: IPL 2025 | ಪ್ಲೇ-ಆಫ್‌ ಮೇಲೆ ಆರ್‌ಸಿಬಿ ಕಣ್ಣು – ಕೊಹ್ಲಿಯೇ ಆಕರ್ಷಣೆ, ಇಂದು ಗೆದ್ದರೆ ಇತಿಹಾಸ

ಆರಂಭದಲ್ಲಿ ಇದು ಅಪಘಾತ ಎಂದು ತಿಳಿದಿದ್ದ ಪೊಲೀಸರಿಗೆ ಸ್ಥಳದಲ್ಲಿದ್ದ ಸಿಸಿಟಿವಿ ಪರಿಶೀಲನೆ ವೇಳೆ ಅಸಲಿ ವಿಚಾರ ಬಯಲಿಗೆ ಬಂದಿದೆ. ಸುಬ್ರಮಣ್ಯಪುರ ಪೊಲೀಸರಿಂದ ಆರೋಪಿ ಪ್ರತೀಕ್ ಬಂಧನವಾಗಿದೆ.

Share This Article