ಬೆಂಗಳೂರು: ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 22ರಂದು ಪಿಜಿಸಿಇಟಿ ನಡೆಯಲಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#PGCET-25 #MCA #MBA ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 19ರ ಸಂಜೆ 6ರವರೆಗೆ ದಿನಾಂಕ ವಿಸ್ತರಿಲಾಗಿದೆ. ಲಿಖಿತ ಪರೀಕ್ಷೆ ಜೂನ್ 22ರಂದು ನಡೆಯಲಿದೆ. ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರು ಅರ್ಜಿ ಸಲ್ಲಿಸಬಹುದು.@CMofKarnataka@drmcsudhakar @KEA_karnataka
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 17, 2025
ಈ ದಿನಾಂಕ ವಿಸ್ತರಣೆ ಕೇವಲ ಎಂಬಿಎ, ಎಂಸಿಎ ಕೋರ್ಸ್‌ಗೆ ಮಾತ್ರ ಅನ್ವಯವಾಗುತ್ತದೆ. ಎಂ.ಟೆಕ್, ಎಂಇ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮುಗಿದಿದೆ. ಮೇ 31ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.