ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

Public TV
1 Min Read
RCB 4

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR)  ಪಂದ್ಯ 5 ಓವರ್‌ಗಳ ಆಟಕ್ಕೆ ಸೀಮಿತವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಹೌದು, ಬೆಂಗಳೂರಿನಲ್ಲಿ (Bengaluru) ಭಾರೀ ಮಳೆಯಾಗುತ್ತಿದ್ದು ಪಂದ್ಯ ಇನ್ನೂ ಆರಂಭವಾಗಿಲ್ಲ. ಒಂದು ವೇಳೆ ಮಳೆ ಮುಂದುವರಿದರೆ ಓವರ್‌ ಕಡಿತವಾಗುತ್ತದೆ.

ರಾತ್ರಿ 8:45ಕ್ಕೆ ಪಂದ್ಯ ಆರಂಭವಾದರೆ ಓವರ್‌ನಲ್ಲಿ ಕಡಿತವಾಗುವುದಿಲ್ಲ. ನಂತರ ಪಂದ್ಯ ನಡೆದರೆ ಓವರ್‌ ಕಡಿತವಾಗುತ್ತದೆ. ರಾತ್ರಿ 10:56ರ ವರೆಗೆ ಪಂದ್ಯ ನಡೆಸಲು ಅವಕಾಶವಿದ್ದು ಕನಿಷ್ಠ 5 ಓವರ್‌ ಆದರೂ ಆಡಿಸಬಹುದು.

RCB Rain chinnaswamy stadium bengaluru

ರಾತ್ರಿ 10:50 ರ ನಂತರವೂ ಮಳೆ ಸುರಿದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಪಂದ್ಯ ರದ್ದುಗೊಂಡರೆ ಎರಡು ತಂಡಗಳಿಗೂ ಸಮಾನವಾಗಿ ಒಂದೊಂದು ಅಂಕ ನೀಡಲಾಗುತ್ತದೆ. ಹೀಗಾಗಿ ಆರ್‌ಸಿಬಿ 12 ಪಂದ್ಯಗಳಿಂದ 17 ಅಂಕ ಪಡೆದರೆ ಕೆಕೆಆರ್‌ 13 ಪಂದ್ಯವಾಡಿ 12 ಅಂಕ ಪಡೆಯುತ್ತದೆ. ಈ ಮೂಲಕ ಕೆಕೆಆರ್‌ ಟೂರ್ನಿಯಿಂದ ನಿರ್ಗಮಿಸುತ್ತದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದು. ಉದಾಹರಣೆಗೆ 1 ಗಂಟೆ ಭಾರೀ ಮಳೆ ಸುರಿದರೂ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ 16 ಅಂಕ ಗಳಿಸಿರುವ ಆರ್‌ಸಿಬಿ ನಾಳಿನ ಪಂದ್ಯ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Share This Article