ಬೆಂಗಳೂರು: ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರ್ ಎಂದು ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ಗ್ರೇಟರ್ ಬೆಂಗಳೂರು ಅಲ್ಲ. ‘ಲೂಟರ್’ಗಳ ಬೆಂಗಳೂರು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?
📌 ಗ್ರೇಟರ್ ಬೆಂಗಳೂರು!?
ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ!
ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು!
ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ!
ಜನರೆಂದರೆ ಜೀವರಹಿತ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2025
ಗ್ರೇಟರ್ ಬೆಂಗಳೂರು!? ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ!. ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು ಎಂದು ಸಿಎಂ, ಡಿಸಿಎಂಗೆ ಟಾಂಗ್ ಕೊಟ್ಟಿದ್ದಾರೆ.
ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ, ನಾಡು ಎಂದರೆ ಮನುಷ್ಯರು ಎಂದು ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ : ಪೂರ್ವ ಮುಂಗಾರು ಮಳೆಗೆ ಬೆಂಗಳೂರು ತತ್ತರ – ಒಂದೇ ಒಂದು ಮಳೆಗೆ ಕೆರೆಯಂತಾದ ರಸ್ತೆಗಳು
ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ? ಕೆರೆ ನೀರಿಗೆ ಕಮಿಷನ್ ಕೋಡಿ ಬಿದ್ದಿದೆ! ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ ಎಂದು ಸರ್ಕಾರವನ್ನು ಹೆಚ್‌ಡಿಕೆ ಪ್ರಶ್ನಿಸಿದ್ದಾರೆ.
ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ? ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ? ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು? ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ!! ಹೊಸ ಶೀಶೆ, ಹಳೇ ಮದ್ಯ. ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು! ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್’ಗಳ ಬೆಂಗಳೂರು ಎಂದು ಟೀಕಿಸಿದ್ದಾರೆ.