ಕನ್ನಡದ ‘ಕೆಜಿಎಫ್’ (KGF) ಚಿತ್ರದಲ್ಲಿ ಯಶ್ ಜೊತೆ ಸೊಂಟ ಬಳುಕಿಸಿದ್ದ ಮೌನಿ ರಾಯ್ (Mouni Roy) ಅವರು 78ನೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ (Cannes Film Festival) ಭಾಗಿಯಾಗಿದ್ದಾರೆ. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಮೌನಿ ಕಂಗೊಳಿಸಿದ್ದಾರೆ. ಇದನ್ನೂ ಓದಿ:’ದಿ ಗರ್ಲ್‌ಫ್ರೆಂಡ್’ ಸಿನಿಮಾ ಏನಾಯ್ತು?- ಕೊನೆಗೂ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ರು ರಶ್ಮಿಕಾ
ಕನ್ನಡದ ನಟಿ ದಿಶಾ ಮದನ್ ಬಳಿಕ ಬಳಕುವ ಬಳ್ಳಿಯಂತಿರುವ ಮೌನಿ ರಾಯ್ ಕೂಡ ಕಾನ್ ಸಿನಿಮಾ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಅದಕ್ಕಾಗಿ ಫ್ರಾನ್ಸ್‌ಗೆ ತೆರಳಿದ್ದಾರೆ. ಕಪ್ಪು ಬಣ್ಣದ ಡ್ರೆಸ್‌ಗೆ ನೀಲಿ ಬಣ್ಣದ ಕಸೂತಿ ಮಾಡಲಾಗಿದೆ. ಅದಕ್ಕೆ ದುಬಾರಿ ನೆಕ್ಲೆಸ್ ಅನ್ನು ನಟಿ ಧರಿಸಿದ್ದಾರೆ. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ನಟಿ ಮಿಂಚಿದ್ದಾರೆ. ಸಖತ್ ಹಾಟ್ ಆಗಿ ಪೋಸ್ ನೀಡಿದ್ದಾರೆ. ಇದನ್ನೂ ಓದಿ:‘ಮುದ್ದು ರಾಕ್ಷಸಿ’ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಡ್ಯಾನ್ಸ್
ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಫಿಲ್ಮ್ ಫೆಸ್ಟಿವಲ್ ಆಯೋಜಕರು ಟೀಮ್ ಅಳೆದು ತೂಗಿ ಕೆಲವೇ ಕೆಲವು ತಾರೆಯರಿಗೆ ಮಾತ್ರ ಆಮಂತ್ರಣ ನೀಡುತ್ತಾರೆ. ಅದರಂತೆ ನಟಿ ಮೌನಿ ರಾಯ್ ಅವರಿಗೂ ಆಹ್ವಾನ ನೀಡಲಾಗಿದೆ. ಹೀಗಾಗಿ ಅವರು ಕೂಡ ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.
ಫ್ರಾನ್ಸ್‌ನಲ್ಲಿ ಈ ಸಿನಿಮಾ ಹಬ್ಬಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಅತೀ ದೊಡ್ಡ ಚಲನಚಿತ್ರೋತ್ಸವಕ್ಕೆ ದೇಶ ವಿದೇಶದ ನಟ-ನಟಿಯರು ಭಾಗಿಯಾಗಿದ್ದಾರೆ. ಈ ಚಲನಚಿತ್ರೋತ್ಸವ ಮೇ 13ರಿಂದ 24ರವರೆಗೆ ನಡೆಯಲಿದೆ.
ಮೌನಿ ಅವರು ವರುಣ್ ಧವನ್ ನಟನೆಯ ಸಿನಿಮಾದಲ್ಲಿ ಪ್ರಸ್ತುತ ನಟಿಸುತ್ತಿದ್ದಾರೆ. ಕೈತುಂಬಾ ಸಿನಿಮಾಗಳು ನಟಿಯ ಕೈಯಲ್ಲಿವೆ.