ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಮಧ್ಯಾಹ್ನದಿಂದಲೇ ಮಳೆ ಸುರಿಯುತ್ತಿದ್ದು, ಕೇಂದ್ರ ಭಾಗ ಸೇರಿದಂತೆ ನಗರದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ.
ಮೇಖ್ರಿ ಸರ್ಕಲ್, ಸದಾಶಿವನಗರ, ಶಿವಾಜಿನಗರ, ವಸಂತನಗರ, ಹೈಗ್ರೌಂಡ್ಸ್, ವಿಧಾನಸೌಧ, ಸೆಂಟ್ರಲ್ ಸಿಲ್ಕ್ ಬೋರ್ಡ್, ಚಾಮರಾಜಪೇಟೆ, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ರೋಡ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಮಹಾಲಕ್ಷ್ಮಿ ಲೇಔಟ್, ಶೇಷಾದ್ರಿಪುರಂ, ಚಿಕ್ಕಪೇಟೆ, ಅರಮನೆ ಮೈದಾನ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ.ಇದನ್ನೂ ಓದಿ: ಹುಬ್ಬಳ್ಳಿ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು – ಮುಸ್ಲಿಮರೇ ಆತಂಕ ವ್ಯಕ್ತಪಡಿಸಿದ್ದಾರೆ ಎಂದ ಟೆಂಗಿನಕಾಯಿ
ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿ, ಕೆಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಈ ಬೆನ್ನಲ್ಲೇ ಮತ್ತೆ ಮಳೆ ಶುರುವಾಗಿದೆ.
ಇನ್ನೂ ಅರಮನೆ ಮೈದಾನದ ಮುಂಭಾಗದ ರಸ್ತೆಯ ಪ್ಯಾಲೆಸ್ ಗುಟ್ಟಹಳ್ಳಿ ಬಳಿ ದೊಡ್ಡಬಳ್ಳಾಪುರ-ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮೇಲೆ ಮರವೊಂದು ಉರುಳಿ ಬಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಕೆ.ಆರ್ ಮಾರ್ಕೆಟ್ ರಸ್ತೆ ಕೆರೆಯಂತಾಗಿದ್ದು, ಮಾರುಕಟ್ಟೆಯಿಂದ ಕಾರ್ಪೋರೇಷನ್ ಕಡೆ ಬರುವ ರಸ್ತೆಯಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಹೀಗಾಗಿ ಬೈಕ್ ಸವಾರರು, ಆಟೋ ಚಾಲಕರು ತಳ್ಳಿಕೊಂಡೇ ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ.ಇದನ್ನೂ ಓದಿ: ಗೃಹಪ್ರವೇಶದ ಸಂಭ್ರಮದಲ್ಲಿ ‘ಪುಷ್ಪ-2’ ನಟಿ ಅನಸೂಯ