ಅಜಯ್ ರಾವ್ ನಟನೆಯ ‘ಸರಳ ಸುಬ್ಬರಾವ್’ ಚಿತ್ರದ ಸಾಂಗ್ ರಿಲೀಸ್

Public TV
2 Min Read
ajai rao

‘ಯುದ್ಧಕಾಂಡ’ ಚಿತ್ರದ ಬಳಿಕ ಅಜಯ್ ರಾವ್ (Ajai Rao) ನಟನೆಯ ‘ಸರಳ ಸುಬ್ಬರಾವ್’ (Sarala Subbarao) ಸಿನಿಮಾದ ‘ರಂಗೋಲಿ’ ಹಾಡು ಬಿಡುಗಡೆ ಆಗಿದೆ. ನಾಯಕಿ ಮಿಶಾ ಜೊತೆ ರೆಟ್ರೋ ಸ್ಟೈಲಿನಲ್ಲಿ ‘ಕೃಷ್ಣ’ ಅಜಯ್ ರಾವ್ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ:ರೆಡ್ಡಿ ಮಗನ ಜೊತೆ ಶ್ರೀಲೀಲಾ ಡ್ಯುಯೆಟ್- ‘ಜೂನಿಯರ್’ ಚಿತ್ರದ ಸಾಂಗ್ ಔಟ್

ajai rao 4 scaledಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ ‘ಸರಳ ಸುಬ್ಬರಾವ್’ ಚಿತ್ರದ ಸಾಂಗ್ ರಿಲೀಸ್ ಆಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಚಿತ್ ಹೆಗ್ಡೆ ಹಾಡಿದ್ದಾರೆ. ಈ ಸಾಂಗ್ ಯೂಟ್ಯೂಬ್‌ನಲ್ಲಿ ಭರ್ಜರಿ ವಿವ್ಸ್ ಆಗ್ತಿದೆ.

ajai rao 5‘ಸರಳ ಸುಬ್ಬರಾವ್’ ಎಂಬುದು ಚಿತ್ರದ ನಾಯಕ, ನಾಯಕಿಯ ಹೆಸರಾಗಿದೆ. ಇದು 1971ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ರೆಟ್ರೊ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕ ಮಂಜು ಸ್ವರಾಜ್ ಮಾತನಾಡಿ, ಅಜಯ್ ರಾವ್ ಅವರ ಅಭಿನಯಕ್ಕೆ ಅವರೇ ಸಾಟಿ. ಪಂಜಾಬಿ ಹುಡುಗಿ ಮಿಶಾ ಕನ್ನಡ ಅರ್ಥ ಮಾಡಿಕೊಂಡು ಅಭಿನಯಿಸಿದ್ದು, ನಿಜಕ್ಕೂ ಖುಷಿಯ ವಿಚಾರ. ರಂಗಾಯಣ ರಘು, ವೀಣಾ ಸುಂದರ್, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ, ಬಸವರಾಜ್ ಅರಸ್ ಸಂಕಲನವಿದೆ ಎಂದು ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:ಗೃಹಪ್ರವೇಶದ ಸಂಭ್ರಮದಲ್ಲಿ ‘ಪುಷ್ಪ-2’ ನಟಿ ಅನಸೂಯ

misha scaled

ಅಜಯ್ ರಾವ್ ಮಾತನಾಡಿ, ಈ ಚಿತ್ರದಲ್ಲಿ ನಟಿಸಿರುವುದು ನನ್ನ ವೈಯಕ್ತಿಕ ಹಾಗೂ ವೃತ್ತಿಜೀವನದ ಹೆಮ್ಮೆ. ಅಂತಹ ಒಂದು ಸುಂದರ ಸಾಂಸಾರಿಕ ಚಿತ್ರ ಸರಳ ಸುಬ್ಬರಾವ್. ಈ ಚಿತ್ರ ಭಾರತೀಯ ಚಿತ್ರರಂಗದ ಸುವರ್ಣ ಯುಗಕ್ಕೆ ಟ್ರಿಬ್ಯುಟ್ ಎಂದರು ತಪ್ಪಾಗಲಾರದು. ನಾನು ಚಿಕ್ಕವಯಸ್ಸಿನಲ್ಲಿ ಸೂಪರ್ ಮ್ಯಾನ್ ಮುಂತಾದ ಚಿತ್ರಗಳನ್ನು ಹೆಚ್ಚು ನೋಡುತ್ತಿದ್ದೆ. ನಾನೇ ಸೂಪರ್ ಹೀರೋ ಅಂದುಕೊಳ್ಳುತ್ತಿದೆ. ಈ ಚಿತ್ರದಲ್ಲೂ ನಾನು ಸೂಪರ್ ಹೀರೊ. ಏಕೆಂದರೆ ಇದು 50 ವರ್ಷಗಳ ಹಿಂದೆ ನಡೆಯುವ ಕಥೆ. ಈ ಚಿತ್ರದಲ್ಲಿ ರೆಟ್ರೊ ಶೈಲಿಯ ಉಡುಗೆಗಳನ್ನು ಹಾಕಿದಾಗ ನಾನು ನನ್ನ ಪಾತ್ರದಲ್ಲಿ ವರನಟ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಅವರನ್ನು ನೋಡಿದ್ದೇನೆ. ಎಷ್ಟು ಜನಕ್ಕೆ ಸಿಗುತ್ತದೆ ಇಂತಹ ಅವಕಾಶ. ಇಂತಹ ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಧನ್ಯವಾದಗಳು ಎಂದಿದ್ದಾರೆ.

ajai rao 3 scaledಮೊದಲ ಬಾರಿಗೆ ಇಂತಹ ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಮಿಶಾ ನಾರಂಗ್.

ajai raoಮಂಜು ಸ್ವರಾಜ್ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಅಜಯ್ ರಾವ್ ಅವರ ಸಹಕಾರ ಅಪಾರ. ಇಡೀ ಚಿತ್ರತಂಡ ನನಗೆ ಪ್ರೋತ್ಸಾಹ ನೀಡಿದ್ದಾರೆ. ಅದರಿಂದ ಒಂದೊಳ್ಳೆ ಕೌಟುಂಬಿಕ ಚಿತ್ರ ನಿಮ್ಮ ಮುಂದೆ ಬರುತ್ತಿದೆ ಎಂದು ನಿರ್ಮಾಪಕ ಲೋಹಿತ್ ನಂಜುಂಡಯ್ಯ ತಿಳಿಸಿದರು.

ಒಟ್ನಲ್ಲಿ ‘ಯುದ್ಧಕಾಂಡ’ ಸಿನಿಮಾ ಬಳಿಕ ‘ಸರಳ ಸುಬ್ಬರಾವ್’ ಚಿತ್ರದ ಟೈಟಲ್‌ನಿಂದ ಮತ್ತು ಹಾಡಿನಿಂದ ಗಮನ ಸೆಳೆಯುತ್ತಿದೆ. ರೆಟ್ರೋ ಗೆಟಪ್‌ನಲ್ಲಿ ಅಜಯ್ ಅವರನ್ನು ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

Share This Article