CRPF ಯೋಧನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳು ಅರೆಸ್ಟ್

Public TV
1 Min Read
Raichuru Crime

ರಾಯಚೂರು: ಸಿಆರ್‌ಪಿಎಫ್ ಯೋಧನ (CRPF Army) ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಯಚೂರಿನ (Raichuru) ಲಿಂಗಸುಗೂರಿನ ಕಸಬಾದಲ್ಲಿ ನಡೆದಿದೆ.

ಹಲ್ಲೆಗೊಳಗಾಗ ಯೋಧನನ್ನು ಕಸಬಾ ಲಿಂಗಸುಗೂರು (Lingasuguru) ಗ್ರಾಮದ ಸಿಆರ್‌ಪಿಎಫ್ ಎಎಸ್‌ಐ ಚನ್ನಬಸಪ್ಪ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: 3 ದಿನಗಳಲ್ಲಿ 11 ಪಾಕ್ ಸ್ಪೈಗಳ ಬಂಧನ – ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್‌ಗಳಾಗಿದ್ದವರು ಬೇಹುಗಾರರಾಗಿ ಕೆಲಸ

ದೆಹಲಿಯಿಂದ (Delhi) ಆಸ್ಸಾಂಗೆ (Assam) ವರ್ಗಾವಣೆಯಾದ ಹಿನ್ನೆಲೆ ರಜೆ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ನಡೆದಿದೆ. ಅಕ್ಕನ ಜಮೀನಿನ ಬದುವಿನ ವಿಚಾರದಲ್ಲಿ ಅಕ್ಕನ ಪರ ನ್ಯಾಯ ಕೇಳಿದ್ದರಿಂದ ಜಗಳವಾಗಿದ್ದು, ಪಕ್ಕದ ಜಮೀನಿನ ಅಮರೇಶ್, ಮಂಜುನಾಥ ಎಂಬುವವರು ಹಲ್ಲೆ ನಡೆಸಿದ್ದಾರೆ.

ವಾಕಿಂಗ್ ಮಾಡುತ್ತಿದ್ದಾಗ ಏಕಾಏಕಿ ಬಂದ ಅಮರೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಚನ್ನಬಸಪ್ಪ ತಪ್ಪಿಸಿಕೊಂಡು ಓಡಿದ್ದು, ಆದರೂ ಬಿಡದೇ ಬೆನ್ನಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಆಗ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ. ಸದ್ಯ ಗಾಯಾಳು ಯೋಧನನ್ನ ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಈ ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಇದನ್ನೂ ಓದಿ: ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ – 3 ವಾರಗಳ ಹಿಂದೆಯೇ ಅರಣ್ಯದಲ್ಲಿ ಬೀಸಾಡಿರುವ ಶಂಕೆ

Share This Article