ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ – ಸಿಎಂ, ಹೆಚ್‌ಡಿಕೆ ಅಭಿನಂದನೆ

Public TV
2 Min Read
Banu Mushtaq

ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್(Banu Mushtaq) ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ(Siddaramaiah) ಅವರು, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮ್ಯಾನೇಜರ್ ದಿಢೀರ್ ವರ್ಗಾವಣೆ

ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ `ಹೃದಯ ದೀಪ’ವನ್ನು ಇಂಗ್ಲಿಷ್‌ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ

ಅಭಿನಂದಿಸಿದ ಹೆಚ್‌ಡಿಕೆ
ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಹಾಗೆಯೇ, ಬೂಕರ್ ಪ್ರಶಸ್ತಿ ಭಾಜನವಾಗಿರುವ ಅವರ `ಹೃದಯ ದೀಪ’ ಕೃತಿಯನ್ನು ಇಂಗ್ಲಿಷ್ ಭಾಷೆಗೆ ಅನುವಾದಿಸಿರುವ ಲೇಖಕಿ ದೀಪಾ ಭಸ್ತಿ ಅವರಿಗೂ ಅಭಿನಂದನೆಗಳು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 26 ನಕ್ಸಲರು ಬಲಿ, ಯೋಧ ಹುತಾತ್ಮ

ಬಾನು ಮುಷ್ತಾಕ್ ಅವರಿಂದ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಕೃತಿಗಳು ಬರಲಿ. ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತವಾಗಲಿ ಹಾಗೂ ಜಗತ್ತಿನ ಉದ್ದಗಲಕ್ಕೂ ಕನ್ನಡದ ಕಂಪು ಹರಡಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್ ಮೂಲಕ ಶುಭಕೋರಿದ್ದಾರೆ.

Share This Article