ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್

Public TV
1 Min Read
yash radhika pandit

ಟಿ ರಾಧಿಕಾ ಪಂಡಿತ್ (Radhika Pandit) ಅವರು ನಟನೆಯಿಂದ ದೂರವಿದ್ರೂ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪತಿ ಯಶ್ (Yash) ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ರಾಧಿಕಾ ದಾಂಪತ್ಯದ ಬಗ್ಗೆ ಪಾಠ ಮಾಡಿದ್ದಾರೆ.‌ ಇದನ್ನೂ ಓದಿ:‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಪವನ್ ಕಲ್ಯಾಣ್

radhika pandit 2ಸ್ಯಾಂಡಲ್‌ವುಡ್‌ನಲ್ಲಿ ಯಶ್ ಮತ್ತು ರಾಧಿಕಾ ಜೋಡಿಗೆ ಅಪಾರ ಅಭಿಮಾನಿಗಳಿದ್ದಾರೆ. ಒಬ್ಬರ ಯಶಸ್ಸಿಗೆ ಮತ್ತೊಬ್ಬರು ಸಾಥ್ ನೀಡುತ್ತಾ ಜೊತೆಯಾಗಿ ಮುನ್ನಡೆಯುತ್ತಿದ್ದಾರೆ. ಹೀಗಿರುವಾಗ ದಾಂಪತ್ಯದ ಬಗ್ಗೆ ನಟಿ ಹಂಚಿಕೊಂಡಿರುವ ಪೋಸ್ಟ್ ಅಭಿಮಾನಿಗಳ ಗಮನ ಸೆಳೆದಿದೆ. ‘ಸಂಬಂಧದಲ್ಲಿ ಅತ್ಯಂತ ಮುಖ್ಯವಾದ ವಿಷಯ ಏನೆಂದರೆ, ಒಟ್ಟಿಗೆ ಇರೋದರ ಜೊತೆಗೆ ಒಬ್ಬರ ಮೌನವನ್ನು ಕೂಡ ಎಷ್ಟು ಅರ್ಥ ಮಾಡಿಕೊಳ್ಳುತ್ತೇವೆ ಅನ್ನೋದು ಮುಖ್ಯ ಎಂದು ರಾಧಿಕಾ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಸಂಸಾರದಲ್ಲಿ ಖುಷಿಯಾಗಿರೋದರ ಗುಟ್ಟನ್ನು ಹೇಳಿದ್ದಾರೆ. ಇದನ್ನೂ ಓದಿ:‘ಆರ್ಯ 3’ ಟೈಟಲ್ ರಿಜಿಸ್ಟರ್ ಮಾಡಿಸಿದ ನಿರ್ಮಾಪಕ- ಸಾಥ್ ನೀಡ್ತಾರಾ ಅಲ್ಲು ಅರ್ಜುನ್?


ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯಶ್ ಮತ್ತು ರಾಧಿಕಾ ಜೋಡಿ 2016ರಲ್ಲಿ ಮದುವೆಯಾದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳು ಸಾಕ್ಷಿಯಾಗಿದ್ದಾರೆ.

radhika pandit

ನಂದಗೋಕುಲ ಸೀರಿಯಲ್, ಮೊಗ್ಗಿನ ಮನಸ್ಸು, ಸಂತು ಸ್ಟ್ರೈಟ್ ಪಾರ್‌ವರ್ಡ್, Mr & Mrs ರಾಮಾಚಾರಿ ಸಿನಿಮಾಗಳಲ್ಲಿ ಯಶ್ ಮತ್ತು ರಾಧಿಕಾ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರಗಳು ಯಶಸ್ಸು ಕಂಡಿವೆ.

Share This Article