– ಸಿನಿಮಾ ಬಿಡುಗಡೆ ಮುನ್ನಾ ದಿನವೇ ನಟನ ಮೇಲೆ ಎಫ್‌ಐಆರ್
ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು (Madenuru Manu) ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್
ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿದೆ.
ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?