ಬೆಂಗಳೂರು: ರನ್ಯಾ (Parameshwara) ಮದುವೆಗೆ ಪರಮೇಶ್ವರ್ (Parameshwara) 15- 20 ಲಕ್ಷ ರೂ. ಗಿಫ್ಟ್ ಕೊಟ್ಟಿರಬಹುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.
ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪರಮೇಶ್ವರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಅವರು, ರನ್ಯಾಗೆ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ. ಆಕೆಯ ಮದುವೆಗೆ ಗಿಫ್ಟ್ ಮಾಡಿರಬಹುದು. ನಾನು ಅವರ ಬಳಿ ಮಾತಾಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಗೃಹ ಸಚಿವ ಪರಂ ಕೇಸ್‌ಗೆ ರನ್ಯಾರಾವ್ ಲಿಂಕ್?
ಪರಮೇಶ್ವರ್ ಆರೋಗ್ಯವಾಗಿದ್ದು, ಕ್ಯಾಬಿನೆಟ್‌ಗೆ ಬರುತ್ತಾರೆ. ಅವರ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಅವರು ಗೌರವಾನ್ವಿತ ವ್ಯಕ್ತಿ, ನಾನು ಅವರ ಜೊತೆ ಇರುತ್ತೇನೆ. ಇನ್ನೂ, ರನ್ಯಾ ತಪ್ಪು ಮಾಡಿದ್ರೆ ಕ್ರಮ ಆಗಲಿ ಎಂದಿದ್ದಾರೆ.
ಇಡಿ ದಾಳಿ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬುಧವಾರ ಸುದ್ದಿಗೋಷ್ಠಿ ನಡೆಸಿ, ರನ್ಯಾರಾವ್ ವಿದೇಶದಿಂದ ಚಿನ್ನ ತಂದು ಹಲವು ಪ್ರಮುಖರಿಗೆ ನೀಡಿರುವ ಮಾಹಿತಿಯಿದೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು ಎಂದು ಆರೋಪಿಸಿದ್ದರು. ಇದನ್ನೂ ಓದಿ: ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?