ನವದೆಹಲಿ: ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ (Housing Quota) ದಿವ್ಯಾಂಗರಿಗೆ 4% ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ (Manohar Lal Khattar) ಗುರುವಾರ ಈ ವಿಷಯ ಪ್ರಕಟಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ʻಸಬ್ ಕಾ ಸಾಥ್, ಸಬ್ ಕಾ ವಿಕಾಸ್ʼ ಉದ್ದೇಶಕ್ಕೆ ಪೂರಕವಾಗುವಂತೆ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಪ್ರವೇಶ ಭಾರತ ಅಭಿಯಾನದಡಿಯಲ್ಲಿ ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ
ಇನ್ಮುಂದೆ ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ.4 ರಷ್ಟು ಮೀಸಲಾತಿ ನೀಡಲಾಗುವುದು, ಇದು ಸಾರ್ವಜನಿಕ ಸೇವೆಗಳಲ್ಲಿ ಸಮಾನತೆ, ಘನತೆ ಮತ್ತು ಪ್ರವೇಶದತ್ತ ಗಣನೀಯ ಹೆಜ್ಜೆಯಾಗಿದೆ ಎಂದು ಖಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ (RPWD) ಕಾಯ್ದೆ, 2016 ರ ಅಡಿಯಲ್ಲಿ, ಎಸ್ಟೇಟ್ ನಿರ್ದೇಶನಾಲಯವು ಅಂಗವಿಕಲರಿಗೆ ಕೇಂದ್ರ ಸರ್ಕಾರಿ ನಿವಾಸಗಳಿಗೆ ಸಮಂಜಸವಾದ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸಿದೆ. ಇದನ್ನೂ ಓದಿ: ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ