ಬೆಂಗಳೂರು: ನೇರಳೆ ಮಾರ್ಗದ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ (Whitefield Metro Station) ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ (Namma Metro) ಸಂಚಾರ ಸ್ಥಗಿತವಾಗಿದೆ.
ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ಮಾತ್ರ ಮೆಟ್ರೋ ಸೇವೆ ಸ್ಥಗಿತಗೊಂಡಿದೆ. ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಿದೆ. ಇದನ್ನೂ ಓದಿ: ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ
ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ಮಾತ್ರ ತಾಂತ್ರಿಕ ಸಮಸ್ಯೆ ಎದುರಾಗಿದ್ದು ಉಳಿದ ಮೆಟ್ರೋ ನಿಲ್ದಾಣಗಳಿಂದ ಎಂದಿನಂತೆ ರೈಲುಗಳು ಸಂಚಾರ ಮಾಡುತ್ತಿದೆ. ಇದನ್ನೂ ಓದಿ: ರನ್ಯಾರಾವ್‌ಗೆ ಪರಮೇಶ್ವರ್ ಶಿಕ್ಷಣ ಸಂಸ್ಥೆ ಸಾಲ ಕೊಟ್ಟಿರಬಹುದು: ರಾಮಲಿಂಗಾ ರೆಡ್ಡಿ
ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ಸ್ಟೇಷನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ನಿಲ್ದಾಣದಿಂದ ರೈಲುಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ನೇರಳೆ ಮಾರ್ಗದ ಹೋಪ್‌ಫಾರ್ಮ್ ಚನ್ನಸಂದ್ರ ನಿಲ್ದಾಣ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಡುವೆ ಮಾತ್ರ ರೈಲುಗಳು ಕಾರ್ಯನಿರ್ವಹಿಸಲಿವೆ. ಹಸಿರು ಮಾರ್ಗದಲ್ಲಿ ಸಾಮಾನ್ಯ ಸೇವೆಗಳು ಮುಂದುವರಿಯುತ್ತವೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.